Wednesday, Feb 26 2020 | Time 10:39 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
International Share

ಕೊರೊನಾ ವೈರಸ್ ನಿಗ್ರಹಕ್ಕೆ ಚೀನಾದಿಂದ ಸಂಶೋಧಕರ ತಂಡ ರಚನೆ

ಬೀಜಿಂಗ್, ಜ 24(ಯುಎನ್ಐ) ಚೀನಾದ ವುಹಾನ್ ಪ್ರಾಂತ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಹಾಗೂ ತಡೆಗಟ್ಟಲು 14 ತಜ್ಞರನ್ನು ಒಳಗೊಂಡ ರಾಷ್ಟ್ರೀಯ ಸಂಶೋಧನಾ ತಂಡವನ್ನು ರಚಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ತುರ್ತು ವೈಜ್ಞಾನಿಕ ಯೋಜನೆಯ ಭಾಗವಾಗಿರುವ ವೈರಸ್ ನಿಗ್ರಹ ಸಂಶೋಧನಾ ತಂಡವನ್ನು ರಾಷ್ಟ್ರೀಯ ಆರೋಗ್ಯ ಆಯೋಗ ಮತ್ತು ಇತರ ವಿಭಾಗಗಳ ಸಹಯೋಗದೊಂದಿಗೆ ಜಂಟಿಯಾಗಿ ರೂಪಿಸಲಾಗಿದೆ ಎಂದು ಕ್ಸಿನುವಾ ಸುದ್ದಿಸಂಸ್ಥೆ ವರದಿಮಾಡಿದೆ.
ಈ ಯೋಜನೆಯು ಸೋಂಕು ಪತ್ತೆ, ಹರಡುವಿಕೆ, ಪತ್ತೆ ವಿಧಾನಗಳು, ಜೀನೋಮ್ ವಿಕಸನ ಮತ್ತು ಲಸಿಕೆ ಅಭಿವೃದ್ಧಿ ಸೇರಿದಂತೆ 10 ಸಂಶೋಧನಾ ಅಂಶಗಳ ಕುರಿತು ವೈಜ್ಞಾನಿಕ ಅಂಶಗಳಬಗ್ಗೆ ಗಮನಹರಿಸಲಿದೆ.
ಉಸಿರಾಟದ ವಿಜ್ಞಾನಿ ಝೋನಾಂಗ್ ನನ್ಶಾನ್ ಅವರನ್ನು ಸಂಶೋಧನಾ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಚೀನೀ ಅಕಾಡೆಮಿ ಆಫ್ ಎಂಜಿನಿಯರಿಂಗ್‌ನ ಶಿಕ್ಷಣ ತಜ್ಞರಾಗಿರುವ ನನ್ಶಾನ್ 2003ರಲ್ಲಿ ಚೀನಾದಲ್ಲಿ ಏಕಾಏಕಿ ಎದುರಾದ ತೀವ್ರ ಉಸಿರಾಟದ ಸಿಂಡ್ರೋಮ್ (ಎಸ್‌ಎ ಆರ್ ) ವಿರುದ್ದದ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಯುಎನ್ಐ ಕೆವಿಆರ್ 1206