Friday, Dec 6 2019 | Time 21:07 Hrs(IST)
  • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
  • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
  • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
  • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
  • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
  • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
  • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
  • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
  • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
  • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
  • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
  • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
  • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
  • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
  • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Special Share

ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ

ನವದೆಹಲಿ, ಜುಲೈ22(ಯುಎನ್ಐ) ಕ್ರಿಪ್ಟೋ ಕರೆನ್ಸಿ ಅಥವಾ ಡಿಜಿಟಲ್ ಕರೆನ್ಸಿ ಮೇಲೆ ದೇಶಾದ್ಯಂತ ನಿಷೇಧ ವಿಧಿಸಲು ಹಾಗೂ ಇವುಗಳನ್ನು ಬಳಸಿ ಚಟುವಟಿಕೆ ನಡೆಸುವವರಿಗೆ ಶಿಕ್ಷೆ ಹಾಗೂ ದಂಡ ವಿಧಿಸುವ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ನೇಮಿಸಿದ್ದ ಅಂತರ ಸಚಿವಾಲಯ ಸಮಿತಿ ಸೋಮವಾರ ಸಲಹೆ ನೀಡಿದೆ.
ಖಾಸಗಿ ಕ್ರಿಪ್ಟೋಕರೆನ್ಸಿಗಳಿಗೆ ಸಂಬಂಧಿಸಿದ ಅಪಾಯಗಳು ಮತ್ತು ಅವುಗಳ ಬೆಲೆಗಳಲ್ಲಿನ ಏರು ಪೇರುಗಳನ್ನು ನೋಡಿದರೆ, ದೇಶದಲ್ಲಿ ಡಿಜಿಟಲ್ ಕರೆನ್ಸಿಯನ್ನು ನಿಷೇಧಿಸಬೇಕು. ಇವುಗಳ ಬಳಸಿ ನಡೆಸುವ ಯಾವುದೇ ಚಟುವಟಿಕೆಯ ಮೇಲೆ ದಂಡ ಹಾಗೂ ಶಿಕ್ಷೆ ವಿಧಿಸಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.
2017 ರ ನವೆಂಬರ್ 2 ರಂದು ಸರ್ಕಾರ ಈ ಸಮಿತಿಯನ್ನು ರಚಿಸಿತ್ತು, ವರ್ಚುವಲ್ ಕರೆನ್ಸಿಗೆ ಸಂಬಂಧಿಸಿದ ವಿಷಯಗಳು ಹಾಗೂ ಈ ಸಂಬಂಧ ಕೈಗೊಳ್ಳಬೇಕಾದ ನಿರ್ದಿಷ್ಟ ಕ್ರಮಗಳ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿಯನ್ನು ರಚಿಸಲಾಗಿತ್ತು.
ಅಧಿಕೃತ ಡಿಜಿಟಲ್ ಕರೆನ್ಸಿ ಕುರಿತಂತೆ ಸರ್ಕಾರ ಮುಕ್ತ ಮನಸ್ಸು ಹೊಂದಬಹುದು ಎಂದು ಸಮಿತಿ ತನ್ನ ವರದಿಯಲ್ಲಿ ಪ್ರಸ್ತಾಪಿಸಿದೆ.
ವರ್ಚುವಲ್ ಕರೆನ್ಸಿಗಳು ಹಾಗೂ ಅವುಗಳ ತಂತ್ರಜ್ಞಾನ ನಿತ್ಯವೂ ಬದಲಾವಣೆಗೊಳ್ಳುತ್ತಿವೆ. ಈ ಸಂಬಂಧಿತ ವಿಷಯಗಳ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಥಾಯಿ ಸಮಿತಿಯೊಂದನ್ನು ರಚಿಸಬೇಕು ಸಮಿತಿ ಶಿಫಾರಸ್ಸು ಮಾಡಿದೆ.
ಸಮಿತಿ ತನ್ನ ವರದಿಯೊಂದಿಗೆ, ಕ್ರಿಪ್ಟೋ ಕರೆನ್ಸಿ ಹಾಗೂ ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ವಿಧೇಯಕ -2019 ರ ಕರಡನ್ನು ಸಲ್ಲಿಸಿದೆ. ವಿಧೇಯಕದ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಸಂಬಂಧ ಪಟ್ಟ ಇಲಾಖೆಗಳು ಹಾಗೂ ನಿಯಂತ್ರಣ ಪ್ರಾಧಿಕಾರಿಗಳು ಸಮಾಲೋಚನೆ ನಡೆಸಲಿವೆ.
ಯುಎನ್ಐ ಕೆವಿಆರ್ ಎಸ್ ಎಲ್ ಎಸ್ 1859