Saturday, Aug 8 2020 | Time 05:52 Hrs(IST)
National Share

ಕುಲ್ಗಾಮ್‍ನಲ್ಲಿ ಮುಂದುವರೆದ ಕಾರ್ಯಾಚರಣೆ: ಎನ್‍ಕೌಂಟರ್‍ ನಲ್ಲಿ ಓರ್ವ ಉಗ್ರ ಹತ

ಶ್ರೀನಗರ, ಜುಲೈ 4 (ಯುಎನ್‌ಐ) ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಕುಲ್ಗಾಮ್‍ನಲ್ಲಿ ಶನಿವಾರ ಭದ್ರತಾ ಪಡೆಗಳು ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ಸ್‍, ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿಯಾಗಿ ಇಂದು ಮಧ್ಯಾಹ್ನ ಕುಲ್ಗಾಮ್‍ ಜಿಲ್ಲೆಯ ಅರ್ರಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋಚ್ಛೆ ಗುಂಡು ಹಾರಿಸಿದ ನಂತರ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಇದುವರೆಗೆ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಇತ್ತೀಚಿನ ವರದಿಗಳು ಬಂದಾಗ ಕಾರ್ಯಾಚರಣೆ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ, ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ತಡೆಯಲು ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶಕ್ಕೆ ನೆರೆಯ ಪ್ರದೇಶಗಳಿಂದ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಯುಎನ್‍ಐ ಎಸ್ಎಲ್ಎಸ್ 1636
More News
ಯುಪಿಎಸ್ಸಿ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಜೋಶಿ ಅಧಿಕಾರ

ಯುಪಿಎಸ್ಸಿ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಜೋಶಿ ಅಧಿಕಾರ

07 Aug 2020 | 10:04 PM

ನವದೆಹಲಿ, ಆಗಸ್ಟ್ 7(ಯುಎನ್ಐ) ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ಶಿಕ್ಷಣತಜ್ಞ ಪ್ರದೀಪ್ ಕುಮಾರ್ ಜೋಶಿ ಶುಕ್ರವಾರ ನೇಮಕವಾಗಿದ್ದಾರೆ.

 Sharesee more..
ಡಾ ಕೆ  ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ಡಾ ಕೆ ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

07 Aug 2020 | 8:41 PM

ನವದೆಹಲಿ, ಆ 7 []]ಯುಎನ್ಐ] ಆಧುನಿಕ ಶಿಕ್ಷಣಕ್ಕೆ ಅಡಿಪಾಯ ಹಾಕುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಇಂತಹ ಅತ್ಯುತ್ತಮ ನೀತಿ ರೂಪಿಸಿದ ಬಾಹ್ಯಾಕಾಶ ವಿಜ್ಞಾನಿ, ಶಿಕ್ಷಣ ತಜ್ಞ ಡಾ.ಕೆ.ಕಸ್ತೂರಿ ರಂಗನ್ ಅವರ ಶ್ರಮ ಶ್ಲಾಘನೀಯ ಎಂದಿದ್ದಾರೆ.

 Sharesee more..
ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ

ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ

07 Aug 2020 | 7:10 PM

ನವದೆಹಲಿ, ಆ 7 (ಯುಎನ್‌ಐ) ಭಾರತದಲ್ಲಿ ಕೊವಿಡ್‍ ನ ಒಟ್ಟು ಪ್ರಕರಣಗಳ ಸಂಖ್ಯೆ 20 ಲಕ್ಷ ದಾಟುತ್ತಿದ್ದಂತೆ, ಕೋವಿಡ್ -19 ರೋಗಿಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಚೇತರಿಕೆಯ ಪ್ರಮಾಣ ಮತ್ತು ಸಾವಿನ ಪ್ರಮಾಣದಲ್ಲಿ ಇಳಿಮುಖ ಕಂಡುಬರುತ್ತಿರುವುದು ಆಶಾದಾಯಕ ಸೂಚನೆಯಾಗಿದೆ.

 Sharesee more..
ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ

ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ

07 Aug 2020 | 6:53 PM

ಇಡುಕ್ಕಿ, ಕೇರಳ ಆ 7 (ಯುಎನ್‌ಐ)- ಜಿಲ್ಲೆಯ ರಾಜಮಾಲಾದ ಪೆಟ್ಟಿಮುಡಿಯಲ್ಲಿ ಶುಕ್ರವಾರ ಭಾರಿ ಮಳೆಯಿಂದಾಗಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 85 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

 Sharesee more..