Monday, Jun 1 2020 | Time 01:49 Hrs(IST)
Karnataka Share

ಕೋವಿಡ್-19 ಧಾರವಾಡದಲ್ಲಿ ಒಬ್ಬ ರೋಗಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಧಾರವಾಡ ಮೇ.23 (ಯುಎನ್ಐ)- ಕೋವಿಡ್-19 ನಿಂದ ಗುಣಮುಖರಾಗಿರುವ ಒಬ್ಬರನ್ನು ಇಂದು ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಮೇ 01 ರಂದು ಕೊರೊನಾ ಸೋಂಕು ದೃಢಪಟ್ಟಿದ್ದ ಹುಬ್ಬಳ್ಳಿ ಕೇಶ್ವಾಪುರ ಶಾಂತಿನಗರದ ಪೀಡಿತ- 589 ( 57 ವರ್ಷ,ಪುರುಷ) ಸಂಪೂರ್ಣ ಗುಣಮುಖರಾಗಿದ್ದಾರೆ.

24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 10 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ವೈದ್ಯರ ತಂಡಕ್ಕೆ ಕೃತಜ್ಞತೆ

ಕೋವಿಡ್ ದೃಢಪಟ್ಟ ನಂತರ ಇಂದಿನವರೆಗೆ ಮುನ್ನೆಚ್ಚರಿಕೆ ಮತ್ತು ಕಾಳಜಿ ಮನೋಭಾವದೊಂದಿಗೆ ವರ್ತಿಸಿದ ಜಿಲ್ಲಾಡಳಿತ ಹಾಗೂ ಕಿಮ್ಸ್ ವೈದ್ಯರು ,ನರ್ಸ್ ಹಾಗೂ ಅರೆವೈದ್ಯಕೀಯ ಸಿಬ್ಬಂದಿಗೆ ಪೀಡಿತ-589 ಕೃತಜ್ಞತೆ ಸಲ್ಲಿಸಿದರು.

ಯುಎನ್ಐ ವಿಎನ್ಎಲ್ 1830