Monday, Aug 3 2020 | Time 23:06 Hrs(IST)
 • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
 • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
 • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
 • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
 • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
 • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
 • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
 • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
 • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
 • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
 • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
 • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
 • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
 • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
Karnataka Share

ಕೋವಿಡ್-19 ನಿಯಂತ್ರಣ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ಸಾವಿರ ಕೋಟಿ ಹಗರಣ: ಎಸ್‌.ಡಿ.ಪಿ.ಐ

ಬೆಂಗಳೂರು, ಜು.5 (ಯುಎನ್ಐ) ರಾಜ್ಯ ಸರ್ಕಾರವು ಕೋವಿಡ್-19 ನಿರ್ವಹಣೆಗಾಗಿ ಇಲ್ಲಿಯವರೆಗೆ ಮೂರು ಸಾವಿರದ ಮುನ್ನೂರ ತೊಂಬತ್ತೆರಡು (3392) ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಯಾವ ಯಾವ ವಿಷಯಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಎಂದು ಮಾಹಿತಿ ಹಕ್ಕು (RTI) ಮೂಲಕ ಕೇಳಿದಾಗ ಆಡಿಟ್ ಆಗಬೇಗು ಎಂಬ ಮಾಹಿತಿಯನ್ನು ರವಾನಿಸುವ ಮೂಲಕ ತಪ್ಪಿಸಿ ಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಆರೋಪಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವ ರೀತಿ ಹಗರಣ ನಡೆದಿದೆ ಎಂಬುವುದಕ್ಕೆ ಉದಾಹರಣೆಯಾಗಿ ನೋಡಿದರೆ 500 ಮಿ.ಲಿ ಸ್ಯಾನಿಟೈಸರ್ ಒಂದಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಅಂಗಸಂಸ್ಥೆ 'ಕರ್ನಾಟಕ ಲಾಜಿಸ್ಟಿಕ್ ಲಿಮಿಟೆಡ್‌' ಸಂಸ್ಥೆಯು ರುಪಾಯಿ 78 ರಂತೆ ಪೂರೈಕೆ ಮಾಡಬಹುದು ಎಂದು ಟೆಂಡರ್ ಕರೆದಾಗ ಹೇಳಿಕೊಂಡಿದೆ. ಆದರೆ ಅವರನ್ನು ಹೊರತುಪಡಿಸಿ ಒಂದು ಚಿಕ್ಕ ಬಾಟಲ್ ಸ್ಯಾನಿಟೈಸರಿಗೆ 600 ರೂ.ಯಂತೆ ಖರೀದಿ ಮಾಡಿದ್ದಾರೆ. ಅದೇ ರೀತಿ ಒಂದು ಥರ್ಮಲ್ ಸ್ಕ್ಯಾನರ್ ಬೆಲೆ ಗರಿಷ್ಠ 3,650 ಮಾತ್ರ. ಆದರೆ ಇವರು ಉಲ್ಲೇಖ ಮಾಡಿರುವಂತಹದ್ದು 9,000 ರೂಪಾಯಿ ಎಂದು ಅವರು ವಿವರಿಸಿದ್ದಾರೆ.
ಅದೇ ರೀತಿ ಆರ್.ಅಶೋಕ್ ಉಸ್ತುವಾರಿಯಾಗಿರುವ ರೆವಿನ್ಯೂ ಡಿಪಾರ್ಟ್ಮೆಂಟ್ ಅಧಿಕಾರಿ ಮಂಜುನಾಥ್ ಪ್ರಸಾದ್ ಎಂಬವರು ಹೈಕೋರ್ಟ್ ಗೆ ಹಾಕಿರುವಂತಹ ಅಫಿಡವಿಟ್ ಪ್ರಕಾರ ರಾಜ್ಯದಲ್ಲಿ ಸುಮಾರು 81ಲಕ್ಷ ಆಹಾರ ಪ್ಯಾಕೆಟ್ ಗಳನ್ನು ವಿತರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಒಂದು ಪ್ಯಾಕೆಟ್ ಗೆ ಗರಿಷ್ಠ 250 ರೂ.ಖರ್ಚು ಆಗಬಹುದು. ಆದರೆ ಇವರು 250 ರಿಂದ 1,650 ರಷ್ಟು ಖರ್ಚು ಮಾಡಿರುವುದಾಗಿ ಉಲ್ಲೇಖಿಸಿದ್ದಾರೆ. ಇದು ಹಗಲು ದರೋಡೆಯಾಗಿದೆ. 81ಲಕ್ಷ ಫೂಡ್ ಪ್ಯಾಕೆಟ್‌ಗಳು ವಿತರಣೆ ಆಗಿದೆ ಎಂಬುವುದಕ್ಕೆ ಸರ್ಕಾರದ ಬಳಿ ಏನು ದಾಖಲೆಗಳಿವೆ ಎಂದು ಮಜೀದ್ ಪ್ರಶ್ನಿಸಿದ್ದಾರೆ.
ಒಂದು ವೆಂಟಿಲೇಟರ್ ಬೆಲೆ ಸುಮಾರು ನಾಲ್ಕರಿಂದ ಐದು ಲಕ್ಷ ರೂಪಾಯಿಗಳು. ಆದರೆ ಸರಕಾರ ರೂ.12 ಲಕ್ಷದಂತೆ 1,000 ವೆಂಟಿಲೇಟರ್‌ಗಳನ್ನು ಖರೀದಿ ಮಾಡಿದೆ. ಇದೇ ತರಹ ಮಾಸ್ಕ್, ಸರ್ಜಿಕಲ್ ಕೈ-ಗ್ಲೌಸ್, ಪರೀಕ್ಷಾ ಕೈ-ಗ್ಲೌಸ್, ಆಕ್ಸಿಜನ್ ಸಿಲಿಂಡರ್ ಗಳಲ್ಲಿ ದುಪ್ಪಟ್ಟು ಹಣದ ಲೆಕ್ಕ ತೋರಿಸಿ ಜನರಿಗೆ ಮೋಸ ಮಾಡಿದೆ. ಆದರೆ ಎಲ್ಲಿ ಯಾವ ರೀತಿ ವಿತರಣೆ ನಡದಿದೆ ಎಂಬುದಕ್ಕೆ ಇವರಲ್ಲಿ ಮಾಹಿತಿ ಇಲ್ಲ ಎಂದು ಅವರು ಆರೋಪಿಸಿದ್ದಾರೆ.
ಇಲ್ಲಿಯವರೆಗೆ ರಾಜ್ಯದಲ್ಲಿ ರೂ. 6.2 ಲಕ್ಷ ಜನರಿಗೆ ಕೋವಿಡ್-19 ಟೆಸ್ಟ್ ಮಾಡಲಾಗಿದೆ ಎಂದು 530 ಕೋಟಿ ಕ್ಲೈಮ್ ಮಾಡಿದ್ದಾರೆ. ಸರಕಾರ ನಿಗದಿಪಡಿಸಿದಂತೆ ಒಬ್ಬರಿಗೆ ರೂ 4,000 ಗಳು, ಅದರ ಪ್ರಕಾರ ರೂ. 240 ಕೋಟಿ ಆಗಬೇಕು, ಆದರೆ 530 ಕೋಟಿ ರೂ. ಕ್ಲೈಮ್ ಮಾಡಿದ್ದಾರೆ. ಅದೇ ರೀತಿ ಮಾಹಿತಿ ಕಿಯೋಸ್ಕ್, ಸೋಂಕಿತರ ಖರ್ಚು ಇತ್ಯರ್ಥದ ಹೆಸರಿನಲ್ಲಿ ಬಹುಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿದ್ದಾರೆ. ಈ ಹಗರಣದ ನೈತಿಕ ಹೊಣೆ ಹೊತ್ತು ತಕ್ಷಣ ಕರ್ನಾಟಕ ಅರೋಗ್ಯ ಸಚಿವರು ರಾಜೀನಾಮೆ ನೀಡಬೇಕು ಮತ್ತು ಹಗರಣದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರ ಹೆಸರು ಕೇಳಿ ಬಂದಿರುವುದರಿಂದ ಅವರ ರಾಜೀನಾಮೆಯನ್ನು ಸಹ ಮುಖ್ಯಮಂತ್ರಿಗಳು ಪಡೆಯಬೇಕು. ಈ ಹಗರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಎಂದು ಎಸ್‌‌ಡಿಪಿಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಯುಎನ್ಐ ಎಎಚ್ 1030