Wednesday, Feb 26 2020 | Time 10:47 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಕಾಶ್ಮೀರದಲ್ಲಿನ ನಿರ್ಬಂಧ : ಇಂದು ಸುಪ್ರೀಂ ಕೋರ್ಟ್ ತೀರ್ಪು ಸಂಭವ

ನವದೆಹಲಿ, ಜನವರಿ 10 (ಯುಎನ್ಐ ) ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಣಿವೆಯಲ್ಲಿ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಇಂದು ಹೊರ ಬೀಳುವ ಸಾಧ್ಯತೆಯಿದೆ.
ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್, ಕಾಶ್ಮೀರ ಟೈಮ್ಸ್ ನ ಕಾರ್ಯನಿರ್ವಾಹಕ ಸಂಪಾದಕ ಅನುರಾಧಾ ಭಾಸಿನ್ ಮತ್ತಿತರರರು ಕಣಿವೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಪ್ರಶ್ನಿಸಿದ್ದರು.
'ರಾಜ್ಯದಲ್ಲಿ ವಿಧಿಸಲಾಗಿರುವ ನಿರ್ಬಂಧಗಳು ಮೂಲಭೂತ ಹಕ್ಕುಗಳ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ಪಷ್ಟ ಉಲ್ಲಂಘನೆ ಎಂದು ಅರೋಪಿಸಿದ್ದರು .

ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿರುವ ತ್ರಿಸದಸ್ಯಪೀಠ ತೀರ್ಪು ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಾಜ್ಯದ ವಿಶೇಷ ಸ್ಥಾನಮಾನ ರದ್ದತಿಯಿಂದ ಆಗಬಹುದಾದ ಪ್ರತಿಭಟನೆಗಳನ್ನು ನಿಯಂತ್ರಿಸುವ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಮೂವರು ಮಾಜಿ ಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮತ್ತು ಮೆಹಬೂಬಾ ಮುಫ್ತಿ ಮತ್ತು ಅನೆಕ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಯುಎನ್ಐ ಕೆಎಸ್ಆರ್ 0922