Friday, Feb 28 2020 | Time 09:52 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಕಾಶ್ಮೀರ ಕಣಿವೆಗೆ ವಿದೇಶಿ ರಾಜತಾಂತ್ರಿಕರ ನಿಯೋಗ ಭೇಟಿ

ನವದೆಹಲಿ, ಜನವರಿ 9 (ಯುಎನ್ಐ) ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ, ಪ್ರಯತ್ನಗಳ ಬಗ್ಗೆ ಮನವರಿಕೆ ಮಾಡುವ ಸಲುವಾಗಿ 15 ಮಂದಿ ವಿದೇಶಿ ರಾಜತಾಂತ್ರಿಕರ ನಿಯೋಗ ಇಂದು ಕಣಿವೆಗೆ ಭೇಟಿ ನೀಡಲಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕಳೆದ ಆಗಸ್ಟ್ನಲ್ಲಿ ಕೇಂದ್ರ ಸರ್ಕಾರ ವಾಪಾಸು ಪಡೆದು ಈ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡುವ ಇಂಗಿತವನ್ನು ವಿದೇಶಿ ರಾಜತಾಂತ್ರಿಕರು ವ್ಯಕ್ತಪಡಿಸಿದ್ದು, ಎರಡು ದಿನಗಳ ಪ್ರವಾಸ ಆಯೋಜಿಸಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.
ಮಧ್ಯಪ್ರಾಚ್ಯ, ಆಫ್ರಿಕಾ ಹಾಗೂ ಲ್ಯಾಟಿನ್ ಅಮೆರಿಕ ಹೀಗೆ ವಿಭಿನ್ನ ಪ್ರದೇಶಗಳಿಂದ ರಾಜತಾಂತ್ರಿಕರನ್ನು ಆಯ್ಕೆ ಮಾಡಲಾಗಿದ್ದು, ಇದು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಮೊದಲ ನಿಯೋಗವಾಗಿದೆ.

ಇನ್ನೂ ಕೆಲ ದೇಶಗಳ ರಾಜತಾಂತ್ರಿಕರು ಭೇಟಿಯನ್ನು ಖಚಿತಪಡಿಸಿಲ್ಲವಾದ್ದರಿಂದ ಕೊನೆಕ್ಷಣದಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾದ್ಯತೆಯೂ ಇದೆ ಎನ್ನಲಾಗಿದೆ.
ಯೂರೋಪಿಯನ್ ಒಕ್ಕೂಟದ ರಾಜತಾಂತ್ರಿಕರು ಈ ನಿಯೋಗದಲ್ಲಿ ಇರುವುದಿಲ್ಲ. ಮತ್ತೊಂದು ಅವರು ಪ್ರತ್ಯೇಕ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಇಯು ರಾಜತಾಂತ್ರಿಕರು ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ದಿನಾಂಕ ನಿಗದಿಯಾಗಲಿದೆ ಎಂದೂ ತಿಳಿದುಬಂದಿದೆ.
ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರನ್ನು ನಿಯೋಗದ ಭೇಟಿ ಮಾಡಲಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಯುಎನ್‌ಐ ಕೆಎಸ್ಆರ್ 1036