Wednesday, Feb 26 2020 | Time 10:48 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಕಾಶ್ಮೀರ, ಸಿಎಎ ಬಗ್ಗೆ ಇಸ್ಲಾಮಿಕ್ ಸಹಕಾರ ಸಂಘಟನೆಯಲ್ಲಿ ಚರ್ಚೆ

ನವದೆಹಲಿ, ಡಿ.30 (ಯುಎನ್ಐ) ಜಮ್ಮು ಮತ್ತು ಕಾಶ್ಮೀರ ಕುರಿತು 57 ಸದಸ್ಯರ ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ಸಚಿವರ ಸಭೆಯನ್ನು 2020 ರ ಏಪ್ರಿಲ್‌ನಲ್ಲಿ ಪಾಕಿಸ್ತಾನ ನಡೆಸಲು ತೀರ್ಮಾನಿಸಿದೆ ಎಂದು ಇಸ್ಲಾಮಾಬಾದ್‌ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇತ್ತೀಚೆಗೆ ನೇಮಕಗೊಂಡ ಸೌದಿ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರು ಇಸ್ಲಾಮಾಬಾದ್‌ಗೆ ಭೇಟಿ ನೀಡಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಸೇರಿದಂತೆ ಪಾಕಿಸ್ತಾನದ ನಾಯಕತ್ವವನ್ನು ಭೇಟಿ ಮಾಡಿದ್ದರು. ಈ ಭೇಟಿಯ ಬಳಿಕ ಈ ಘೋಷಣೆ ಹೊರಬಿದ್ದಿದೆ.
"ಒಐಸಿ, ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು [ಜಮ್ಮು ಮತ್ತು ಕಾಶ್ಮೀರದ] ಪರಿಸ್ಥಿತಿಯ ಬಗ್ಗೆ ಬಲವಾದ ಹೇಳಿಕೆ ನೀಡಬೇಕು ಎಂದು ನಾನು ಸೌದಿ ವಿದೇಶಾಂಗ ಸಚಿವರಿಗೆ ಹೇಳಿದೆ" ಎಂದು ಖುರೇಷಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.
ರೇಡಿಯೊ ಪಾಕಿಸ್ತಾನದ ಪ್ರಕಾರ, ಸೌದಿ ಅರೇಬಿಯಾ ನೇತೃತ್ವದ ಮುಸ್ಲಿಂ ಬಹುಸಂಖ್ಯಾತ ದೇಶಗಳ ಒಐಸಿ ಗುಂಪಿನ ಮಂತ್ರಿಗಳ ಸಭೆಯನ್ನು ನಡೆಸಲು ಅಧಿಕಾರಿಗಳು ಚರ್ಚಿಸಿದ್ದಾರೆ, “ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಮತ್ತು ಭಾರತದ ಮುಸ್ಲಿಂ ವಿರೋಧಿ ಕಾನೂನು ಜಾರಿ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಚಿವರ ಸಭೆ “ಏಪ್ರಿಲ್ 2020 ರಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯುವ ನಿರೀಕ್ಷೆಯಿದೆ” ಎಂದು ವರದಿ ಹೇಳಿದೆ.
ಸಭೆಯನ್ನು ಒಐಸಿ ಅಧಿಕೃತವಾಗಿ ಘೋಷಿಸುವವರೆಗೆ ಈ ಬಗ್ಗೆ ಪ್ರತಿಕ್ರಿಯಿಸಲು ವಿದೇಶಾಂಗ ಸಚಿವಾಲಯ ನಿರಾಕರಿಸಿತು. ಇದು ದೃಢಪಟ್ಟರೆ, ಈ ವರ್ಷದ ಆರಂಭದಲ್ಲಿ ಅಬುಧಾಬಿಯಲ್ಲಿ ನಡೆಯುವ ಒಐಸಿ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಇಸ್ಲಾಮಿಕ್ ಗುಂಪಿನೊಂದಿಗಿನ ಮಾತುಕತೆ ಮುಂದುವರಿಸುವ ಸರ್ಕಾರದ ಪ್ರಯತ್ನಗಳಿಗೆ ಈ ಕ್ರಮವು ಹಿನ್ನಡೆ ಎಂದೇ ಪರಿಗಣಿಸಲಾಗುತ್ತದೆ.
ಪಾಕಿಸ್ತಾನವು ಟರ್ಕಿ, ಇರಾನ್ ಮತ್ತು ಮಲೇಷ್ಯಾವನ್ನು ಒತ್ತಾಯಿಸುವವರೆಗೂ ಅರಬ್ ಜಗತ್ತು ಕಾಶ್ಮೀರದ ವಿಷಯವನ್ನು ಹೆಚ್ಚಾಗಿ ಪರಿಗಣಿಸಿರಲಿಲ್ಲ. ಹೊಸ ಮುಸ್ಲಿಂ ಬಣಗಳ ರಚನೆಯಿಂದಾಗಿ, ಹಳೆಯ ಬಣ - ಒಐಸಿ - ತಮ್ಮ ತಪ್ಪನ್ನು ಅರಿತುಕೊಂಡಿದೆ "ಎಂದು ಪಾಕಿಸ್ತಾನದ ಸೆನೆಟ್ ಮಾನವ ಹಕ್ಕುಗಳ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಮುಸ್ತಫಾ ನವಾಜ್ ಖೋಕರ್ ಹೇಳಿದ್ದಾರೆ.
ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಎರಡೂ ದೇಶಗಳು, ಕಾಶ್ಮೀರದಲ್ಲಿ ಸರ್ಕಾರದ ಕ್ರಮಗಳ ಬಗ್ಗೆ ಮತ್ತು ಸಿಎಎ ಬಗ್ಗೆ ಅಭಿಪ್ರಾಯ ಇದುವರೆಗೆ ವ್ಯಕ್ತಪಡಿಸಿಲ್ಲ.
ಯುಎನ್ಐ ಎಎಚ್ 923