Wednesday, Feb 26 2020 | Time 10:39 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಕ್ಷಮಿಸಿ, ಪೆರಿಯಾರ್ ಕುರಿತ ಹೇಳಿಕೆಗೆ ವಿಷಾದವಿಲ್ಲ, ಕ್ಷಮೆ ಕೋರುವುದೂ ಇಲ್ಲ-ರಜನೀಕಾಂತ್

ಚೆನ್ನೈ, ಜ22(ಯುಎನ್‍ಐ)- ಪೆರಿಯಾರ್ ಅವರು 1971ರಲ್ಲಿ ನಡೆಸಿದ ಮೆರವಣಿಗೆಯ ಬಗ್ಗೆ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ನಟ ರಜನೀಕಾಂತ್ ಅವರು, ಈ ಕುರಿತಂತೆ ತಾವು ಕ್ಷಮೆ ಕೋರುವುದಿಲ್ಲ ಇಲ್ಲವೇ ಇದಕ್ಕಾಗಿ ವಿಷಾದವನ್ನು ವ್ಯಕ್ತಪಡಿಸುವುದೂ ಇಲ್ಲ ಎಂದು ಹೇಳಿದ್ದಾರೆ.
ಕ್ಷಮೆ ಕೋರುವಂತೆ ಒತ್ತಾಯಿಸಿ ಪೆರಿಯಾರ್ ದ್ರಾವಿಡರ್ ಕಳಗಂ(ಪಿಡಿಕೆ) ಕಾರ್ಯಕರ್ತರು ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ಪೋಯಿಸ್ ಗಾರ್ಡನ್ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ಊಹಾಪೋಹವಲ್ಲ ಎಂದಿದ್ದಾರೆ. ತಮ್ಮ ಹೇಳಿಕೆಗೆ ಪೂರಕವಾಗಿ 2017ರಲ್ಲಿ ಔಟ್‍ಲುಕ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಉಲ್ಲೇಖಿಸಿದ್ದಾರೆ.
‘ಕೇಳಿರುವುದನ್ನು ಮತ್ತು ಪತ್ರಿಕೆಯಲ್ಲಿ ಪ್ರಕಟವಾಗಿರುವುದರ ಬಗ್ಗೆ ಹೇಳಿಕೆ ನೀಡಿದ್ದೇನೆ.’ ಎಂದು ಹೇಳಿರುವ ರಜನೀಕಾಂತ್, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಔಟ್‍ಲುಕ್‍ನಲ್ಲಿ ಪ್ರಕಟವಾದ ವರದಿಯ ಬಗ್ಗೆ ಉಲ್ಲೇಖಿಸಿದ ಅವರು, ಪೆರಿಯಾರ್ ಅವರ ನೇತೃತ್ವದಲ್ಲಿ 1971ರಂದು ಸೇಲಮ್ ನಲ್ಲಿ ನಡೆದ ಮೆರವಣಿಗೆಯಲ್ಲಿ ಶ್ರೀರಾಮ ಮತ್ತು ಸೀತೆಯ ವಿಗ್ರಹಗಳಿಗೆ ಚಪ್ಪಲಿ ಹಾರ ಹಾಕಲಾಗಿತ್ತು.’ ಎಂದು ಹೇಳಿದ್ದಾರೆ.
‘ತಾವು ಇದನ್ನು ಉಲ್ಲೇಖಿಸುತ್ತಿದ್ದಂತೆ ವಿವಾದ ಸೃಷ್ಟಿಯಾಗಿದೆ. ತಮ್ಮಿಂದ ಕ್ಷಮೆಗೂ ಒತ್ತಾಯಿಸಲಾಗುತ್ತಿದೆ. ಆದರೆ ತಾವು ವರದಿಯ ಹೊರತಾಗಿ ಬೇರೆ ಏನನ್ನೂ ಹೇಳಿಲ್ಲ.’ ಎಂದು ರಜನೀಕಾಂತ್ ಪತ್ರಿಕೆ ವರದಿಯನ್ನು ತೋರಿಸಿದ್ದಾರೆ.
‘ಕ್ಷಮಿಸಿ ನಾನು ಕ್ಷಮೆ ಕೋರುವುದಿಲ್ಲ.’ ಎಂದು ಹೇಳಿರುವ ರಜನೀಕಾಂತ್, ಮೆರವಣಿಗೆ ವೇಳೆ ಹಾಜರಿದ್ದ ಅಂದಿನ ಜನಸಂಘದ ನಾಯಕ ಲಕ್ಷ್ಮಣನ್ (ಈ ಬಿಜೆಪಿಯಲ್ಲಿದ್ದಾರೆ) ಇದನ್ನು ಧೃಡಪಡಿಸಿದ್ದಾರೆ.
ಹಳೆಯ ಇಂತಹ ಘಟನೆಗಳನ್ನು ಪದೇ ಪದೇ ಕೆದಕಬಾರದು. ಇದು ನಿರಾಕರಿಸಬೇಕೆನ್ನು ವಿಷಯವಾಗಿಲ್ಲವಾದರೂ, ಇದನ್ನು ಮರೆಯಬೇಕು ಎಂದು ಹೇಳಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1350