Wednesday, Aug 21 2019 | Time 23:52 Hrs(IST)
 • ಚಿದಂಬರಂ ಬಂಧನ: ಪ್ರಧಾನಿ ಮೋದಿ ಚುನಾವಣಾ ಭರವಸೆ ಈಡೇರಿಕೆ
 • ಐ ಎನ್ ಎಕ್ಸ್ ಮೀಡಿಯಾ ಪ್ರಕರಣ : ಮಾಜಿ ಸಚಿವ ಪಿ ಚಿದಂಬರಂ ಸಿಬಿಐ ವಶಕ್ಕೆ
 • ಶ್ರೀನಗರದಲ್ಲಿ ಶುಕ್ರವಾರ ಸಾರ್ವಜನಿಕರನ್ನು ಭೇಟಿ ಮಾಡಲಿರುವ ರಾಜ್ಯಪಾಲರ ಸಲಹೆಗಾರ
 • ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರನ್ನು ವಶಕ್ಕೆ ಪಡೆದ ಸಿಬಿಐ
 • ಮುಂದಿನ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ರಾಜೀವ್ ಗೌಬಾ ನೇಮಕ
 • ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ – ಅಜಿತ್ ದೋವಲ್ ಮಾತುಕತೆ
 • ನಾನು ಓಡಿಹೋಗಿಲ್ಲ, ನ್ಯಾಯದಿಂದ ರಕ್ಷಣೆ ಪಡೆಯಲು ಕೆಲಸ ಮಾಡುತ್ತಿದ್ದೇನೆ: ಚಿದಂಬರಂ
 • ಆರ್ ಟಿಐ ಕಾರ್ಯಕರ್ತ ಬಾಳಿಗ ಹತ್ಯೆ ಪ್ರಕರಣ; ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ
 • ಎಂಡಿಎಸ್ ಶುಲ್ಕ ತಾರತಮ್ಯ; ನಾಲ್ಕು ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
 • ಸರ್ಕಾರಿ ವಾಹನಗಳಿಗೆ ಮಹಿಳಾ ಚಾಲಕರ ನೇಮಕ; ಕೇರಳ ಸಂಪುಟ ಸಮ್ಮತಿ
 • ಐಎನ್ ಎಕ್ಸ್ ಮೀಡಿಯಾ ಪ್ರಕರಣ; ಚಿದಂಬರಂ ವಿರುದ್ಧ ಸಿಬಿಐ, ಇಡಿ ಲುಕ್ ಔಟ್ ನೋಟೀಸ್ ಜಾರಿ
 • ಕೆಲಸ ಸರಿಯಾಗಿ ನಿರ್ವಹಿಸಲಾಗದಿದ್ದರೆ, ಬೇರೆಡೆಗೆ ವರ್ಗ ಮಾಡಿಸಿಕೊಳ್ಳಿ ; ಇಂಜಿನಿಯರ್ ಗಳಿಗೆ ಮೇಯರ್ ತರಾಟೆ
 • ಯಾಂತ್ರೀಕೃತ ಮೀನುಗಾರಿಕೆ ಬೋಟ್‍ಗಳಿಗೆ ತೆರಿಗೆ ರಹಿತ ಡೀಸೆಲ್ ಹೆಚ್ಚಳ: ಮುಖ್ಯಮಂತ್ರಿ
 • ಅಯೋಧ್ಯೆ ಪ್ರಕರಣ: ರಾಮ ಜನ್ಮಭೂಮಿಯಲ್ಲಿ ಜನರ ನಂಬಿಕೆ ಸಾಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ
 • ಪಕ್ಷೇತರ ಶಾಸಕ ಅನಂತ್ ಸಿಂಗ್ ವಿರುದ್ಧ ಲುಕ್ಔಟ್ ನೋಟಿಸ್
Karnataka Share

ಗಂಗಾಮತಸ್ಥರ ಸಂಘದ ಅಧ್ಯಕ್ಷ ಬಿ.ಮೌಲಾಲಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು, ಜುಲೈ 17 (ಯುಎನ್ಐ) ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಅಧ್ಯಕ್ಷ ಬಿ.ಮೌಲಾಲಿ ಹಾಗೂ ಸಹಚರರಿಂದ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎ.ಎಚ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದಿಂದ ನಡೆದ ಚುನಾವಣೆಯಲ್ಲಿ 143 ಜನರ ಪೂರ್ಣ ಸಮಿತಿ ರಚನೆಯಾಗಿದ್ದು, ಮೌಲಾಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಅಂದಿನಿಂದ ಸಂಘದ ಹಣವನ್ನು ವೈಯಕ್ತಿಕ ಕಾರಣಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ವಿಚಾರಿಸಿದರೆ ತಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಾ ಸಂಘದ ಕಾರ್ಯಕಲಾಪಗಳಿಂದ ದೂರ ಇರಿಸಿದ್ದಾರೆ ಎಂದು ಪ್ರಶಾಂತ್ ಆರೋಪಿಸಿದರು.

ಸಂಘದ ಬೈಲಾ ವಿರುದ್ಧವಾಗಿ ಚಟುವಟಿಕೆಗಳನ್ನು ನಡೆಸುತ್ತಾ ‌ಕಾನೂನುಬಾಹಿರವಾಗಿ ಸಭೆಗಳನ್ನು ನಡೆಸುವುದು, ಅನಧಿಕೃತವಾಗಿ ಕಟ್ಟಡಗಳನ್ನು ಒಡೆದಿರುವುದು, ಸಂಘದ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿದ್ದು, ಈ ಕುರಿತು ಸಂಸ್ಥೆಗಳ ಉಪನಿಬಂಧಕರ ನ್ಯಾಯಾಲಯದಲ್ಲಿ ಮೌಲಾಲಿ ವಿರುದ್ಧ ತಡೆಯಾಜ್ಞೆ ಜಾರಿಯಾಗಿದೆ.‌ ಕಾನೂನು ಬದ್ಧವಾಗಿ ಸಂಘವನ್ನು ಮುನ್ನಡೆಸಲು ಬಿ.ಮೌಲಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಘದ ಹಿತದೃಷ್ಟಿಯಿಂದ ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯುಎನ್ಐ ಡಿಸಿ ಎಸ್ಎ 1653
More News