Thursday, Aug 22 2019 | Time 00:17 Hrs(IST)
Parliament Share

ಗುಜರಾತಿಗಳೆಂಬ ಕಾರಣಕ್ಕೆ ಅಂಬಾನಿ ಮತ್ತು ಅದಾನಿ ಟಾರ್ಗೆಟ್‌ : ಸಚಿವ ರುಪಾಲ

ಗುಜರಾತಿಗಳೆಂಬ ಕಾರಣಕ್ಕೆ ಅಂಬಾನಿ ಮತ್ತು ಅದಾನಿ ಟಾರ್ಗೆಟ್‌ : ಸಚಿವ ರುಪಾಲ
ಗುಜರಾತಿಗಳೆಂಬ ಕಾರಣಕ್ಕೆ ಅಂಬಾನಿ ಮತ್ತು ಅದಾನಿ ಟಾರ್ಗೆಟ್‌ : ಸಚಿವ ರುಪಾಲ

ನವದೆಹಲಿ, ಜುಲೈ 19 (ಯುಎನ್‌ಐ) ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆಗೆ ಉತ್ತರಿಸುವಾಗ ರಫೆಲ್‌, ಅಂಬಾನಿ ಮತ್ತು ಅದಾನಿ ಅವರ ಹೆಸರಿನ ಪ್ರಸ್ತಾಪಕ್ಕೆ ಕೃಷಿ ಖಾತೆ ರಾಜ್ಯ ಸಚಿವ ಪುರುಷೋತ್ತಮ್ ರೂಪಾಲಾ ಶುಕ್ರವಾರ ಆಕ್ಷೇಪಿಸಿದರು.

ಉದ್ಯಮಿಗಳಾದ ಅಂಬಾನಿ ಮತ್ತು ಅದಾನಿ ಅವರನ್ನು ಗುಜರಾತ್‌ ಮೂಲದವರು ಎಂಬ ಕಾರಣಕ್ಕೆ ಪ್ರತಿಪಕ್ಷದವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದ್ದಾರೆ.

ರೈತ ಆಯೋಗದ ರಚನೆ ಕುರಿತು ಬಿಜೆಪಿ ಸಂಸದ ವಿಜಯ್ ಪಾಲ್ ಸಿಂಗ್ ತೋಮರ್ ಅವರು ಮಂಡಿಸಿದ ನಿರ್ಣಯಕ್ಕೆ ರೂಪಾಲಾ ಉತ್ತರಿಸುತ್ತಿದ್ದು, ರೈತರ ಸ್ಥಿತಿ ಮತ್ತು ಕೃಷಿ ಕುರಿತು ಚರ್ಚೆಯ ವೇಳೆ ರಫೆಲ್‌, ಅಂಬಾನಿ ಮತ್ತು ಅದಾನಿಯವರ ಉಲ್ಲೇಖ ದುರದೃಷ್ಟಕರ ಎಂದು ಹೇಳಿದ್ದಾರೆ.

ಅನಿಲ್ ಅಂಬಾನಿ ರಫೇಲ್ ತಯಾರಕರಿಂದ ಕೇವಲ 800 ಕೋಟಿ ರೂ.ಗಳ ಉಪ ಗುತ್ತಿಗೆ ಪಡೆದರು. ಆದರೆ ಅವರು ತಮ್ಮ ಜೇಬಿನಿಂದ 30,000 ಕೋಟಿ ರೂ. ವ್ಯಯಿಸಿದ್ದಾರೆ ಎಂದು ರೂಪಾಲ ತಿಳಿಸಿದ್ದಾರೆ.

800 ಕೋಟಿ ರೂ. ಮೌಲ್ಯದ ಗುತ್ತಿಗೆಯಿಂದ ಅನಿಲ್‌ ಅಂಬಾನಿ ಹೇಗೆ 30 ಸಾವಿರ ಕೋಟಿ ರೂ. ಪಡೆದರು ಎಂದು ಅರ್ಥೈಸಿಕೊಳ್ಳಲು ನಾನು ವಿಫಲವಾಗಿದ್ದೇನೆ ಎಂದು ರೂಪಾಲ ವ್ಯಂಗವಾಡಿದ್ದಾರೆ.

ಆಪ್‌ ಸಂಸದ ಸಂಜಯ್‌ ಸಿಂಗ್‌ ರೂಪಾಲ ಉತ್ತರಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ, ಈ ಚರ್ಚೆಯಲ್ಲಿ ಗುಜಾರಾತಿ ವಿಷಯ ಹೇಗೆ ಬಂದಿದೆ ಎಂದು ಪ್ರಶ್ನಿಸಿದರು.

ಈ ಹಿಂದೆ ಆಪ್‌ ಸಂಸದರು ಸರ್ಕಾರದಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಅಂಬಾನಿ, ಅದಾನಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ಯುಎನ್‌ಐ ಕೆಎಸ್‌ವಿ ವಿಎನ್‌ಎಲ್‌ 2030

More News
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

07 Aug 2019 | 4:18 PM

ನವದೆಹಲಿ, ಆಗಸ್ಟ್ 7 (ಯುಎನ್ಐ) ರಾಜ್ಯಸಭೆಯಲ್ಲಿ ಬುಧವಾರ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಮ್ಮತಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ 2019 ಯಾವುದೇ ಚರ್ಚೆಯಿಲ್ಲದೆ ಅಂಗೀಕಾರವಾಯಿತು.

 Sharesee more..
ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್‍ಗೆ ಸಂತಾಪ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್‍ಗೆ ಸಂತಾಪ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

07 Aug 2019 | 2:32 PM

ನವದೆಹಲಿ, ಆ 7 (ಯುಎನ್ಐ) ಕಳೆದ ರಾತ್ರಿ ನಿಧನರಾದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವೆ ಹಾಗೂ ಮೇಲ್ಮನೆಯ ಮಾಜಿ ಸದಸ್ಯೆ ಸುಷ್ಮಾ ಸ್ವರಾಜ್ ಅವರಿಗೆ ರಾಜ್ಯಸಭೆಯಲ್ಲಿ ಸಂತಾಪ ಸಲ್ಲಿಸಿ 249ನೇ ರಾಜ್ಯಸಭೆಯ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

 Sharesee more..