Friday, Feb 28 2020 | Time 09:21 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಗುಡಿಯಾ ಪ್ರಕರಣ: ಇಬ್ಬರನ್ನು ಅಪರಾಧಿಗಳು ಎಂದು ಘೋಷಿಸಿದ ನ್ಯಾಯಾಲಯ

ನವದೆಹಲಿ, ಜ.18 (ಯುಎನ್ಐ) ಐದು ವರ್ಷ ಪ್ರಾಯದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನರೇಶ್ ಕುಮಾರ್ ಮಲ್ಹೋತ್ರಾ ಅವರು ಶನಿವಾರ ಮನೋಜ್ ಶಾ ಮತ್ತು ಪ್ರದೀಪ್ ಕುಮಾರ್ ಎಂಬಿಬ್ಬರು ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದಾರೆ.
2013ರಲ್ಲಿ ಬಾಲಕಿ ನೆರೆಮನೆಯ ಬಾಡಿಗೆ ಮನೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
"ನಮ್ಮ ಸಮಾಜದಲ್ಲಿ ಅಪ್ರಾಪ್ತ ಬಾಲಕಿಯನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ಸಂತ್ರಸ್ತ ಮಗುವಿನ ಮೇಲೆ ಅತ್ಯಂತ ಕ್ರೂರ ರೀತಿಯಲ್ಲಿ ನೋವು ನೀಡಲಾಗಿದೆ" ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.
ಶಿಕ್ಷೆಯ ಪ್ರಮಾಣ ಕುರಿತ ವಾದಗಳು ಜನವರಿ 30, ಗುರುವಾರ ನಡೆಯಲಿದೆ.
ಯುಎನ್ಐ ಎಎಚ್ 2056