Wednesday, Feb 26 2020 | Time 10:29 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಗೋಮಾಂಸ ರಫ್ತಿನಲ್ಲಿ ಭಾರತಕ್ಕೆ ಎರಡನೇ ಸ್ಥಾನ !!!

ನವದೆಹಲಿ, ಡಿ 30 (ಯುಎನ್ಐ) ದೇಶಾದ್ಯಂತ ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕು, ಕಸಾಯಿ ಖಾನೆಗಳನ್ನು ಮುಚ್ಚಿಸಬೇಕು ಎನ್ನುವ ಕೂಗು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿರುವ ಸಮಯದಲ್ಲೇ ಗೋಮಾಂಸ ರಫ್ತಿನಲ್ಲಿ ಭಾರತಕ್ಕೆ ಎರಡನೇ ಸ್ಥಾನ ಪಡೆದಿದೆ ಎಂಬ ಅಚ್ಚರಿ ಮತ್ತು ಅಘಾತಕಾರಿ ಸುದ್ದಿ ಬಹಿರಂಗವಾಗಿದೆ.

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕು ಎಂದು ಹಿಂದೂ ಸಂಘಟನೆಗಳಿಂದ ದಿನ ನಿತ್ಯ ಒತ್ತಾಯ ದಿನವೂ ಕೇಳಿ ಬರುತ್ತಿದೆ ಇದೇ ಕಾರಣಕ್ಕಾಗಿ ಅನೇಕ ಕಡೆ ಗುಂಪು ಹತ್ಯೆಗಳು ಜರುಗುತ್ತಿವೆ.
ದೇಶದ ಕೆಲ ರಾಜ್ಯಗಳು ಮಾತ್ರ ಗೋ ಹತ್ಯೆ ನಿಷೇಧ ಮಾಡಿವೆ. ವಿಶ್ವದ ನಾನಾ ರಾಷ್ಟ್ರಗಳು ಗೋ ಮಾಂಸವನ್ನು ರಫ್ತು ಮಾಡುತ್ತವೆ. ಇದರಲ್ಲಿ ಭಾರತ ಕೂಡ ಹಿಂದೆ ಬಿದ್ದಿಲ್ಲ. 2017-19ರ ಅವಧಿಯಲ್ಲಿ ಗೋಮಾಂಸ ರಫ್ತಿನಲ್ಲಿ ಬ್ರೆಜಿಲ್ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಭಾರತ ಎರಡನೇ ಸ್ಥಾನ, ಮೂರನೆ ಸ್ಥಾನದಲ್ಲಿ ಆಸ್ಟ್ರೇಲಿಯಾ ಇದೆ.
2017ರಲ್ಲಿ18 ಲಕ್ಷ ಮೆಟ್ರಿಕ್ ಟನ್, 2018ರಲ್ಲಿ 19 ಮೆಟ್ರಿಕ್ ಲಕ್ಷ ಟನ್ ಗೋಮಾಂಸವನ್ನುಭಾರತ ರಫ್ತು ಮಾಡಿದೆ. 2019ರಲ್ಲಿ ಇದು 16 ಲಕ್ಷ ಮೆಟ್ರಿಕ್ ಟನ್ ಗೆ ಇಳಿಕೆ ಆಗಿದೆ. ಬ್ರೆಜಿಲ್ 2017ರಲ್ಲಿ 19 ಮೆಟ್ರಿಕ್ ಟನ್ ದನದ ಮಾಂಸ ರಫ್ತು ಮಾಡಿದ್ದರೆ, 2019ರಲ್ಲಿ ಈ ಪ್ರಮಾಣ 22 ಲಕ್ಷ ಮೆಟ್ರಿಕ್ ಟನ್ ಗೆ ಹೆಚ್ಚಳವಾಗಿದೆ ಎಂದೂ ಅಮೆರಿಕ ಕೃಷಿ ಇಲಾಖೆ ಬಿಡುಗಡೆ ಮಾಡಿದ ವರದಿ ತಿಳಿಸಿದೆ.
ಯುಎನ್ಐ ಕೆಎಸ್ಆರ್ 0953