Sunday, Mar 29 2020 | Time 00:11 Hrs(IST)
National Share

ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ, ಫೆ 26 (ಯುಎನ್ಐ) ಈಶಾನ್ಯ ದೆಹಲಿಯ ಗಲಭೆ, ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡು ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಿಕ್ಕಿಹಾಕಿಕೊಂಡಿರುವ 22 ರೋಗಿಗಳನ್ನು ತುರ್ತು ಹೆಚ್ಚಿನ ಚಿಕಿತ್ಸೆ ಕರೆದೊಯ್ಯಲು ಅಗತ್ಯ ಭದ್ರತೆ ನೀಡುವಂತೆ ದೆಹಲಿ ಹೈಕೋರ್ಟ್, ಮಧ್ಯರಾತ್ರಿ ಆದೇಶಿಸಿದೆ.
ಮಧ್ಯರಾತ್ರಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಮುರಳೀಧರ್ ನಿವಾಸದಲ್ಲಿ ನಡೆದ ವಿಚಾರಣೆ ಬಳಿಕ ಈ ಆದೇಶ ನೀಡಲಾಗಿದೆ.

ಜಂಟಿ ಆಯುಕ್ತ ಅಲೋಕ್ ಕುಮಾರ್ ಮತ್ತು ಡಿಸಿಪಿ (ಅಪರಾಧ) ರಾಜೇಶ್ ದೇವ್, ದಿಲ್ಲಿ ಸರ್ಕಾರದ ಅಭಿಯೋಜಕ ಸಂಜಯ್ ಘೋಷ್ ಈ ಸಮಯದಲ್ಲಿ ಹಾಜರಿದ್ದರು.
ನ್ಯೂ ಮುಸ್ತಫಾಬಾದ್ ಪ್ರದೇಶದ ಅಲ್ ಹಿಂದ್ ಆಸ್ಪತ್ರೆಯಲ್ಲಿ ಹಲವು ಮಂದಿ ಗಾಯಾಳುಗಳು ಸಿಕ್ಕಿಹಾಕಿಕೊಂಡಿದ್ದು, ತುರ್ತು ಹಾಗೂ ಅನಿವಾರ್ಯ ಚಿಕಿತ್ಸೆಗೆ ಅವರನ್ನು ಜಿಬಿಟಿ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲಎಂದು ಹಿರಿಯ ವಕೀಲರು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನ್ಯಾಯಮೂರ್ತಿಗಳು ಮಧ್ಯರಾತ್ರಿಯೇ ನಡೆಸಿದರು.
ಆಂಬುಲೆನ್ಸ್ ವಾಹನ ಸಂಚಾರಕ್ಕೂ ಗಲಭೆಕೋರರು ಅವಕಾಶ ನೀಡುತ್ತಿಲ್ಲ. ಪರಿಸ್ಥಿತಿ ಇನ್ನೂ ಬಿಗುವಿನಿಂದ ಕೂಡಿದೆ. ರೋಗಿಗಳನ್ನು ಜಿಬಿಟಿ ಆಸ್ಪತ್ರೆಗೆ ಕರೆದೊಯ್ಯಲು ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.
ಇದು ರೋಗಿಗಳ ಸಾವು ಬದುಕಿನ ಪ್ರಶ್ನೆಯಾದ ಸರ್ಕಾರಿ , ಇನ್ನಿತರೆ ಹೆಚ್ಚಿನ ಸೌಲಭ್ಯ ವಿರುವ ಆಸ್ಪತ್ರೆಗಳಿಗೆ ಕರೆದೊಯ್ಯಲು ಅಗತ್ಯ ಭದ್ರತೆ ನೀಡಬೇಕು ಎಂದೂ ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದಾರೆ.
ಯುಎನ್ಐ ಕೆಎಸ್ಆರ್ 0940
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..