Friday, Feb 28 2020 | Time 09:47 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಗುರುವಾರದ ನಂತರವಷ್ಟೇ ಬಿಜೆಪಿ ಚುನಾವಣಾ ಸಮಿತಿಯಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ, ಜ 15 (ಯುಎನ್‌ಐ) ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಅಥವಾ ಶುಕ್ರವಾರ ಪ್ರಕಟಿಸುವ ಸಾಧ್ಯತೆ ಇದೆ.

ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಗುರುವಾರ ಸಭೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಮಹಾರಾಷ್ಟ್ರಕ್ಕೆ ಒಂದು ದಿನ ಭೇಟಿ ನೀಡುತ್ತಿರುವುದರಿಂದ ಮತ್ತು ಪಕ್ಷದ ಮುಖ್ಯಸ್ಥ ಅಮಿತ್ ಶಾ ಗುಜರಾತ್‌ನಲ್ಲಿರುವುದರಿಂದ ಜನವರಿ 16 ರಂದು ಸಭೆ ಸಾಧ್ಯ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಿಇಸಿ ಪ್ರಧಾನಿ ನರೇಂದ್ರ ಮೋದಿಯವರನ್ನೂ ಒಳಗೊಂಡಿದೆ.

70 ಸದಸ್ಯರ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮಂಗಳವಾರ ತನ್ನ ಎಲ್ಲ ಅಭ್ಯರ್ಥಿಗಳನ್ನು ಹೆಸರಿಸಿತ್ತು.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಮೂರು ವಿಧಾನಸಭಾ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಲು ಹಣಾಹಣಿಗೆ ಸಜ್ಜಾಗುತ್ತಿದೆ.

ಸಿಎಎ ವಿರುದ್ಧದ ಪ್ರತಿಭಟನೆ ಮತ್ತು ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಕ್ಯಾಂಪಸ್‌ಗಳಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ ದೆಹಲಿ ಚುನಾವಣೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

2019 ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಏಳು ಸ್ಥಾನಗಳನ್ನು ಗೆದ್ದಿದ್ದು ಈ ಬಾರಿಯ ಚುನಾವಣೆಯಲ್ಲಿ ಕೇಸರಿ ಪಕ್ಷ ಸೋತರೆ ಸಿಎಎ ಮತ್ತು 370 ನೇ ವಿಧಿ ರದ್ದತಿಯ ಮುಖ್ಯ ರೂವಾರಿ ಎಂದು ಪರಿಗಣಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರ್ಧಾರಕ್ಕೆ ವಿರೋಧ ಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಬೇಕಾಗಬಹುದಾಗಿದೆ.
ಯುಎನ್ಐ ಜಿಎಸ್ಆರ್ 2035