Friday, Feb 28 2020 | Time 08:25 Hrs(IST)
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಗುಲಾಂ ನಬಿ ಆಜಾದ್, ಅಂಬಿಕಾ ಸೋನಿ ಜನವರಿ 16ರಿಂದ ಜಮ್ಮು ಭೇಟಿ

ಜಮ್ಮು, ಜ.13 (ಯುಎನ್‌ಐ) ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಜಮ್ಮು ಮತ್ತು ಕಾಶ್ಮೀರ ಉಸ್ತುವಾರಿ ಅಂಬಿಕಾ ಸೋನಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಜನವರಿ 16ರಿಂದ ಎರಡು ದಿನ ಜಮ್ಮು ಮತ್ತು ಕಾಶ್ಮೀರದ ಚಳಿಗಾಲದ ರಾಜಧಾನಿ ಜಮ್ಮುವಿಗೆ ಭೇಟಿ ನೀಡಲಿದ್ದಾರೆ.
ಎಐಸಿಸಿ ನಾಯಕರು ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಪ್ರಸ್ತುತ ರಾಜಕೀಯ ಮತ್ತು ಭದ್ರತಾ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಪಕ್ಷದ ವಕ್ತಾರರೊಬ್ಬರು ತಿಳಿಸಿದರು.
ಅವರು ರಾಜ್ಯದ ಪ್ರಸ್ತುತ ರಾಜಕೀಯ ಮತ್ತು ಭದ್ರತಾ ಸನ್ನಿವೇಶಗಳ ಬಗ್ಗೆ ಮಾಹಿತಿ ಪಡೆಯಲು ಮಾಜಿ ಸಚಿವರು ಮತ್ತು ಮಾಜಿ ಶಾಸಕರು ಸೇರಿದಂತೆ ಪಕ್ಷದ ಹಿರಿಯ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಹಿರಿಯ ನಾಯಕರು ಎಐಸಿಸಿ ಮುಖಂಡರನ್ನು ಭೇಟಿ ಮಾಡಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಸನ್ನಿವೇಶದ ಬಗ್ಗೆ ತಿಳಿಸುತ್ತಾರೆ ಎಂದು ಅವರು ಹೇಳಿದರು.
ಪಕ್ಷದ ಪ್ರಸ್ತುತ ರಾಜಕೀಯ ಬೆಳವಣಿಗೆ ಮತ್ತು ಮಾರ್ಗಸೂಚಿಯನ್ನು ಚರ್ಚಿಸಲು ಪಿಸಿಸಿ ಕಾರ್ಯಕಾರಿ ಸಮಿತಿ ಸಭೆಯನ್ನು ಕೂಡ ಇದೇ ವೇಳೆ ಕರೆಯಲಾಗಿದೆ ಎಂದು ಅವರು ಹೇಳಿದರು.
ಯುಎನ್ಐ ಎಎಚ್ 1940