Friday, Aug 7 2020 | Time 17:42 Hrs(IST)
 • ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್
 • ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ
 • ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡುವ ವಿಶ್ವಾಸ ಹೊರಹಾಕಿದ ಮಿಶ್ರಾ
 • ಕ್ವಾರಂಟೈನ್‌ ನಿಯಮ ಉಲ್ಲಂಘನೆ; ಪ್ರತಿ ಸಾವಿರ ವ್ಯಕ್ತಿಗೆ ಇಬ್ಬರ ಮೇಲೆ ಎಫ್‌ಐಆರ್‌ ದಾಖಲು
 • ಕಾಂಗ್ರೆಸ್‌-ಚೀನಾ ಸರ್ಕಾರದ ಒಡಂಬಡಿಕೆ ಸುಪ್ರೀಂಕೋರ್ಟ್‌ಗೆ ಕೂಡ ಅಚ್ಚರಿ ತಂದಿದೆ; ನಡ್ಡಾ
 • ಡಾ ಕೆ ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
 • ಕೊಂಕಣ ರೈಲ್ವೆಯಿಂದ ರೈಲುಗಳ ಮಾರ್ಗ ಬದಲಾವಣೆ
 • ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ
 • ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ
 • ಕೊಡಗು ಜಿಲ್ಲೆಯಲ್ಲಿ ಕೊರೊನಾಗೆ ಮಹಿಳೆ ಬಲಿ: ಸಾವಿನ ಸಂಖ್ಯೆ 11ಕ್ಕೇರಿಕೆ
 • ಗಾಂಜಾ ಮಾರಾಟ ಯತ್ನ: ಒಡಿಶಾ ಮೂಲದ ವ್ಯಕ್ತಿ ಬಂಧನ
 • ಧಾರವಾಡ: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿಕೆ
 • ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್‍ನಿಂದ ಕದನವಿರಾಮ ಉಲ್ಲಂಘನೆ: ಮೂವರು ನಾಗರಿಕರಿಗೆ ಗಾಯ
 • ಶಬನಮ್ ಡೆವಲಪರ್ಸ್ ನ ಶೂಟ್‍ಔಟ್ ಪ್ರಕರಣ; 13 ವರ್ಷ ಬಳಿಕ ಪ್ರಮುಖ ಆರೋಪಿ ಸೆರೆ
 • ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಿಯಾ ಚಕ್ರವರ್ತಿ ತೀವ್ರ ವಿಚಾರಣೆ
National Share

ಗೋವಾದಿಂದ ಬಿಹಾರ, ಜಾರ್ಖಂಡ್ ಮತ್ತು ಇತರ ರಾಜ್ಯಗಳಿಗೆ ಹೊರಟ ವಿಶೇಷ ಶ್ರಮಿಕ್ ಎಕ್ಸ್‌ಪ್ರೆಸ್ ರೈಲುಗಳು

ಪಣಜಿ, ಜೂನ್ 20 (ಯುಎನ್‌ಐ) ಸಿಲುಕಿರುವ ವಲಸಿಗರನ್ನು ಹೊತ್ತ ಎರಡು ವಿಶೇಷ ಶ್ರಮಿಕ್ ಎಕ್ಸ್‌ಪ್ರೆಸ್ ರೈಲುಗಳು ಶುಕ್ರವಾರ ಮಡಗಾವ್‍ ರೈಲ್ವೆ ನಿಲ್ದಾಣದಿಂದ ವಿವಿಧ ರಾಜ್ಯಗಳಿಗೆ ಹೊರಟಿವೆ.
ಕೊಂಕಣ ರೈಲ್ವೆಯ 05054 ಸಂಖ್ಯೆಯ ವಿಶೇಷ ಶ್ರಮಿಕ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ 6 ಗಂಟೆಗೆ ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ 1297 ಪ್ರಯಾಣಿಕರನ್ನು ಹೊತ್ತು ಹೊರಟರೆ, 05056 ಸಂಖ್ಯೆಯ ಮತ್ತೊಂದು ವಿಶೇಷ ರೈಲು ರಾತ್ರಿ 9 ಗಂಟೆಗೆ 1083 ಪ್ರಯಾಣಿಕರನ್ನು ಹೊತ್ತು ಜಾರ್ಖಂಡ್, ಚತ್ತೀಸ್‌ಗಢ ಮತ್ತು ಉತ್ತರ ಒಡಿಶಾಕ್ಕೆ ಹೊರಟಿತು.
ರಾಷ್ಟ್ರವ್ಯಾಪಿ ಲಾಕ್‍ಡೌನ್‍ ಜಾರಿಯಲ್ಲಿರುವುದರಿಂದ ಗೋವಾದಲ್ಲಿ ಸಿಲುಕಿರುವ ಜನರು ಈ ರೈಲುಗಳ ಮೂಲಕ ಪ್ರಯಾಣಿಸುತ್ತಿದ್ದಾರೆ. ತಮ್ಮ ಸ್ಥಂತ ಊರುಗಳನ್ನು ತಲುಪಲು ಶ್ರಮಿಕ್ ಎಕ್ಸ್‌ಪ್ರೆಸ್ ರೈಲುಗಳನ್ನು ವ್ಯವಸ್ಥೆ ಮಾಡಿದ್ದಕ್ಕಾಗಿ ಗೋವಾ ಸರ್ಕಾರಕ್ಕೆ ಪ್ರಯಾಣಿಕರು ಧನ್ಯವಾದ ತಿಳಿಸಿದ್ದಾರೆ.
ಇಲ್ಲಿಯವರೆಗೆ, 84 ವಿಶೇಷ ಶ್ರಮಿಕ್ ಎಕ್ಸ್‌ಪ್ರೆಸ್ ರೈಲುಗಳ ಮೂಲಕ 84,283 ಪ್ರಯಾಣಿಕರನ್ನು ಅವರ ಸ್ವಂತ ಸ್ಥಳಗಳಿಗೆ ವಾಪಸ್ ಕಳುಹಿಸಲಾಗಿದೆ.
ಎಲ್ಲಾ ಪ್ರಯಾಣಿಕರಿಗೆ ರೈಲು ಹತ್ತುವ ಮೊದಲು ಆಹಾರ ಪ್ಯಾಕೆಟ್‌ಗಳು, ನೀರಿನ ಬಾಟಲಿಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ನೀಡಲಾಗಿದೆ. ರೈಲು ಹತ್ತುವ ವೇಳೆ ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳಿಗೆ ವಿಶೇಷ ಆರೈಕೆ ನೀಡಲಾಯಿತು. ನಿಲ್ದಾಣದಲ್ಲಿ ಮತ್ತು ರೈಲುಗಳ ಒಳಗೆ ಸಾಮಾಜಿಕ ಅಂತರ, ಮುಖಗವಸು ಧರಿಸುವುದು ಮತ್ತು ನೈರ್ಮಲ್ಯವನ್ನು ಖಚಿತಪಡಿಸಿಕೊಳ್ಳಲಾಗಿದೆ.
ಯುಎನ್‍ಐ ಎಸ್‍ಎಲ್ಎಸ್ 1048