Friday, Aug 7 2020 | Time 17:34 Hrs(IST)
 • ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್
 • ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ
 • ಟೀಮ್‌ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡುವ ವಿಶ್ವಾಸ ಹೊರಹಾಕಿದ ಮಿಶ್ರಾ
 • ಕ್ವಾರಂಟೈನ್‌ ನಿಯಮ ಉಲ್ಲಂಘನೆ; ಪ್ರತಿ ಸಾವಿರ ವ್ಯಕ್ತಿಗೆ ಇಬ್ಬರ ಮೇಲೆ ಎಫ್‌ಐಆರ್‌ ದಾಖಲು
 • ಕಾಂಗ್ರೆಸ್‌-ಚೀನಾ ಸರ್ಕಾರದ ಒಡಂಬಡಿಕೆ ಸುಪ್ರೀಂಕೋರ್ಟ್‌ಗೆ ಕೂಡ ಅಚ್ಚರಿ ತಂದಿದೆ; ನಡ್ಡಾ
 • ಡಾ ಕೆ ಕಸ್ತೂರಿರಂಗನ್ ವಿವಾದಾತೀತರು: ತಪಸ್ಸಿನಂತೆ ನೂತನ ಶಿಕ್ಷಣ ನೀತಿ ರೂಪಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ
 • ಕೊಂಕಣ ರೈಲ್ವೆಯಿಂದ ರೈಲುಗಳ ಮಾರ್ಗ ಬದಲಾವಣೆ
 • ಕೇರಳದಲ್ಲಿ ಭಾರೀ ಭೂಕುಸಿತ: 10 ಮಂದಿ ಸಾವು, 85 ಮಂದಿ ನಾಪತ್ತೆ
 • ಕೊವಿಡ್‍: ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 68ಕ್ಕೆ ಏರಿಕೆ: ಸಾವಿನ ಪ್ರಮಾಣ ಶೇ2 05ಕ್ಕೆ ಇಳಿಕೆ
 • ಕೊಡಗು ಜಿಲ್ಲೆಯಲ್ಲಿ ಕೊರೊನಾಗೆ ಮಹಿಳೆ ಬಲಿ: ಸಾವಿನ ಸಂಖ್ಯೆ 11ಕ್ಕೇರಿಕೆ
 • ಗಾಂಜಾ ಮಾರಾಟ ಯತ್ನ: ಒಡಿಶಾ ಮೂಲದ ವ್ಯಕ್ತಿ ಬಂಧನ
 • ಧಾರವಾಡ: ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿಕೆ
 • ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್‍ನಿಂದ ಕದನವಿರಾಮ ಉಲ್ಲಂಘನೆ: ಮೂವರು ನಾಗರಿಕರಿಗೆ ಗಾಯ
 • ಶಬನಮ್ ಡೆವಲಪರ್ಸ್ ನ ಶೂಟ್‍ಔಟ್ ಪ್ರಕರಣ; 13 ವರ್ಷ ಬಳಿಕ ಪ್ರಮುಖ ಆರೋಪಿ ಸೆರೆ
 • ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಿಯಾ ಚಕ್ರವರ್ತಿ ತೀವ್ರ ವಿಚಾರಣೆ
National Share

ಗೃಹ ಸಂಪರ್ಕತಡೆ ರದ್ದುಗೊಳಿಸುವ ಲೆಫ್ಟಿನೆಂಟ್‍ ಗವರ್ವರ್ ಆದೇಶದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ- ಸಿಸೋಡಿಯಾ

ನವದೆಹಲಿ, ಜೂನ್ 20 (ಯುಎನ್ಐ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೃಹ ಸಂಪರ್ಕ ತಡೆ ರದ್ದುಗೊಳಿಸಲು ಮತ್ತು ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿನ ಆಸ್ಪತ್ರೆಗಳ ಹಾಸಿಗೆಗಳ ದರವನ್ನು ಪರಿಷ್ಕರಿಸುವ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಆದೇಶದ ಬಗ್ಗೆ ಯಾವುದೇ ಒಮ್ಮತಕ್ಕೆ ಬಂದಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಇಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ಸಭೆಯಲ್ಲಿ ಕೋವಿಡ್ -19 ಸೋಂಕು ದೃಢಪಟ್ಟ ಎಲ್ಲರಿಗೂ ಐದು ದಿನಗಳ ಕಡ್ಡಾಯ ಸಾಂಸ್ಥಿಕ ಸಂಪರ್ಕತಡೆ ಜಾರಿಗೊಳಿಸುವ ಬೈಜಾಲ್ ಅವರ ನಿರ್ಧಾರವನ್ನು ಸಿಸೋಡಿಯಾ ವಿರೋಧಿಸಿದರು.
ಈಗಾಗಲೇ ನಿರ್ಮಾಣಗೊಂಡಿರುವ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕೋವಿಡ್ ದೃಢಪಟ್ಟ ಮತ್ತು ರೋಗ ಲಕ್ಷಣರಹಿತ ರೋಗಿಗಳನ್ನು ಕಡ್ಡಾಯವಾಗಿ ಐದು ದಿನಗಳವರೆಗೆ ಸಾಂಸ್ಥಿಕ ಸಂಪರ್ಕತಡೆಯಲ್ಲಿರಿಸಬೇಕು ಎಂಬ ಆದೇಶದಿಂದ ಜನರಿಗೆ ತೊಂದರೆಯಾಗಲಿದೆ ಎಂದು ಹೇಳಿದ್ದಾರೆ.
‘ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಎರಡು ಪ್ರಮುಖ ವಿಷಯಗಳನ್ನು ಚರ್ಚಿಸಿದ್ದೇವೆ. ಇದು ದೆಹಲಿಯ ಖಾಸಗಿ ಆಸ್ಪತ್ರೆಗಳಲ್ಲಿನ ಹಾಸಿಗೆಗಳ ದರವನ್ನು ತಗ್ಗಿಸುವುದು ಮತ್ತು ಕೊವಿಡ್- 19 ರೋಗಿಗಳಿಗೆ ಗೃಹ ಸಂಪರ್ಕ ತಡೆ ರದ್ದುಗೊಳಿಸುವ ಲೆಫ್ಟಿನೆಂಟ್ ಗವರ್ವರ್ ಆದೇಶನ್ನು ವಿರೋಧಿಸುವುದಾಗಿದೆ. ಕಡ್ಡಾಯ ಸಾಂಸ್ಥಿಕ ಸಂಪರ್ಕತಡೆಯನ್ನು ತೆಗೆದುಕೊಳ್ಳುವ ಈ ನಿರ್ಧಾರವನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರೋಧಿಸಿದ್ದಾರೆ. ಈ ನಿರ್ಧಾರ ದೆಹಲಿಯನ್ನು ಅವ್ಯವಸ್ಥೆಯ ಸ್ಥಿತಿಗೆ ತಳ್ಳುತ್ತದೆ.’ ಎಂದು ಸಿಸೋಡಿಯಾ ಹೇಳಿದ್ದಾರೆ.
ಸದ್ಯದ ಅಂಕಿ-ಅಂಶಗಳನ್ನು ಗಮನಿಸಿದರೆ ಸದ್ಯ ಗೃಹಸಂಪರ್ಕ ತಡೆಯಲ್ಲಿ 10,000 ಕ್ಕೂ ಹೆಚ್ಚು ಜನರಿದ್ದಾರೆ. ಸಂಪರ್ಕತಡೆ ಕೇಂದ್ರಗಳಲ್ಲಿ ಕೇವಲ 6,000 ಹಾಸಿಗೆಗಳಿವೆ. ಆದ್ದರಿಂದ ಎಲ್ಲರಿಗೂ ಸರ್ಕಾರ ಸೌಲಭ್ಯ ಒದಗಿಸುವುದಾದರೂ ಹೇಗೆ? ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.
uni sls 1759