Wednesday, Sep 23 2020 | Time 01:01 Hrs(IST)
Karnataka Share

ಚಾರ್ಮಾಡಿ ಘಾಟ್‌ನಲ್ಲಿ ಭೂ ಕುಸಿತ: ವಾಹನ ಸಂಚಾರ ಸ್ಥಗಿತ

ಮಂಗಳೂರು, ಆ.7 (ಯುಎನ್ಐ) ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಆಲೇಖಾನ್ ಹೊರಟಿ ಸಮೀಪ ರಸ್ತೆಯಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದು, ಅಪಾಯಕಾರಿ ಸ್ಥಿತಿಯಿರುವ ಕಾರಣ ಘಾಟಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧ ಹೇರಲಾಗಿದೆ.
ರಸ್ತೆಯಲ್ಲಿ ಸುಮಾರು 15 ಅಡಿ ಅಂತರದಲ್ಲಿ ಸಮನಾಂತರವಾಗಿ ಎರಡೂ ಕಡೆ ಬಿರುಕು ಕಾಣಿಸಿಕೊಂಡಿದೆ. ಈ ಬಿರುಕುಗಳ ಮೂಲಕ ನೀರು ಇಳಿಯುತ್ತಿದ್ದು ಇನ್ನಷ್ಟು ಭೂ ಕುಸಿತವಾಗುವ ಆತಂಕವಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಯುಎನ್ಐ ಎಎಚ್ 2036
More News
ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

22 Sep 2020 | 10:23 PM

ಬೆಂಗಳೂರು, ಸೆ 22 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6974 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 83 ಮಂದಿ ಮೃತಪಟ್ಟಿದ್ದಾರೆ.

 Sharesee more..

ಕಾಂಗ್ರೆಸ್ ವಕ್ತಾರರ ಪಟ್ಟಿ ಸಿದ್ಧತೆ

22 Sep 2020 | 9:27 PM

 Sharesee more..