Wednesday, Feb 26 2020 | Time 10:39 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಜಮ್ಮು-ಕಾಶ್ಮೀರದಲ್ಲಿ ಎಸ್‍ಎಂಎಸ್ ಸೇವೆಗಳು ಪುನರಾರಂಭ: ಆಸ್ಪತ್ರೆಗಳಲ್ಲಿ ಇಂಟರ್ ನೆಟ್ ಸೌಲಭ್ಯ

ಶ್ರೀನಗರ, ಜ1 (ಯುಎನ್‍ಐ)- ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಕಳೆದ ವರ್ಷದ ಆಗಷ್ಟ್ 5ರಂದು 370ನೇ ವಿಧಿ ರದ್ದುಗೊಂಡ ನಂತರ ಸ್ಥಗಿತಗೊಂಡಿದ್ದ ಎಸ್‍ಎಂಎಸ್ ಸೇವೆಗಳು ಕಳೆದ ರಾತ್ರಿಯಿಂದ ಪುನಾರಂಭಗೊಂಡಿವೆ.
ಅಲ್ಲದೆ, ಜಮ್ಮು-ಕಾಶ್ಮೀರದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಬ್ರಾಡ್‍ಬ್ಯಾಂಡ್ ಇಂಟರ್ ನೆಟ್ ಸೌಲಭ್ಯ ಮತ್ತೆ ಆರಂಭವಿಸಲಾಗಿದೆ.
ಕಥುವಾ ಜಿಲ್ಲೆಯ ಲಖನ್‍ಪುರ್, ಅನಂತ್‍ನಾಗ್ ಜಿಲ್ಲೆಯ ಲೋಯರ್ ಮುಂಡಾ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಕೇಂದ್ರಾಡಳಿತ ಪ್ರದೇಶದ ಇತರ ಎಲ್ಲ ಕಡೆ ಟೋಲ್ ಪ್ಲಾಜಾಗಳು ಇಂದಿನಿಂದ ರದ್ದುಗೊಳ್ಳಲಿವೆ ಎಂದು ಜಮ್ಮು-ಕಾಶ್ಮೀರ ಸರ್ಕಾರದ ವಕ್ತಾರ ರೋಹಿತ್ ಕನ್ಸಾಲ್ ಜಮ್ಮುವಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟೋಲ್‍ಪ್ಲಾಜಾಗಳಿಂದ ಕೇಂದ್ರಾಡಳಿತ ಪ್ರದೇಶಕ್ಕೆ 1,500 ಕೋಟಿ ರೂ. ನಷ್ಟವಾಗಲಿದೆ. ಈ ಕುರಿತಂತೆ ಹಣಕಾಸು ಸಚಿವಾಲಯ ಈಗಾಗಲೇ ಆದೇಶಗಳನ್ನು ಹೊರಡಿಸಿದೆ. ಕೈಗಾರಿಕೆ ಮತ್ತು ಉತ್ಪಾದನಾ ವಲಯ ಮತ್ತು ಸ್ಪರ್ಧಾತ್ಮಕವಾಗಿ ಅಭಿವೃದ್ಧಿಹೊಂದಲು ವಿವಿಧ ಭಾಗೀದಾರರೊಂದಿಗೆ ಸಂವಾದ ನಡೆಸಿ, ಸಲಹೆಗಳನ್ನು ನೀಡಲು ಸಲಹಾಗಾರ ಕೆ.ಕೆ.ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕನ್ಸಾಲ್ ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1142