Wednesday, Feb 26 2020 | Time 10:36 Hrs(IST)
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
National Share

ಜಮ್ಮು-ಕಾಶ್ಮೀರ ಭೇಟಿ ಪೂರ್ಣಗೊಂಡ ನಂತರ ಕೇಂದ್ರ ಸಚಿವರಿಂದ ಪ್ರಧಾನಿಗೆ ವರದಿ ಸಲ್ಲಿಕೆ

ಜಮ್ಮು, ಜ 22(ಯುಎನ್‍ಐ)-ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ಕಾರ್ಯಕ್ರಮದ ಭಾಗವಾಗಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ನಡೆಸುತ್ತಿರುವ ಕೇಂದ್ರ ಸಚಿವರ ದಂಡು, 370ನೇ ವಿಧಿ ರದ್ದುಗೊಂಡ ನಂತರ ದೊರಲಿರುವ ಲಾಭಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದು, ಇದರ ವರದಿಯನ್ನು ಭೇಟಿ ಮುಗಿದ ನಂತರ ಪ್ರಧಾನಿಗೆ ಸಲ್ಲಿಸಲಿದ್ದಾರೆ.
ಸುಮಾರು 36 ಕೇಂದ್ರ ಸಚಿವರು ಜ 19ರಿಂದ 24ರವರೆಗೆ ಕೇಂದ್ರಾಡಳಿತ ಪ್ರದೇಶದ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಮೆರವಣಿಗೆಗಳು, ಸಾರ್ವಜನಿಕ ಸಭೆಗಳು ಮತ್ತು ಸಂವಾದಗಳನ್ನು ನಡೆಸುತ್ತಿದ್ದಾರೆ. ‘ಭೇಟಿ ಪೂರ್ಣಗೊಂಡ ನಂತರ ಸಚಿವರು ಪ್ರಧಾನಿಯವರಿಗೆ ವರದಿ ಸಲ್ಲಿಸಲಿದ್ದಾರೆ.’ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಭೆಗಳನ್ನು ಆಯೋಜಿಸುವುದಕ್ಕೆ ಮತ್ತು ಭಾಷಣ ಮಾಡುವುದಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ಕಾರ್ಯಾಲಯ ಸಚಿವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಮುಂದಿನ ಕ್ರಮಕ್ಕಾಗಿ ಸಚಿವರು ಭೇಟಿಯ ಮಾಹಿತಿ ಮತ್ತು ಫಲಶ್ರುತಿ ಕುರಿತಂತೆ ಪ್ರಧಾನಿಯವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಎರಡನೇ ಹಂತದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಪ್ರಧಾನಿ ಮೋದಿ ಅವರು ಸಹ ಜ 26ರಂದು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಸಾಧ್ಯತೆಯೂ ಇದೆ.
ಕಳೆದ ಬುಧವಾರ 11 ಕೇಂದ್ರ ಸಚಿವರು ಜಮ್ಮು, ಪೂಂಚ್, ಉಧಮ್‍ಪುರ, ರಜೋರಿ, ರಂಬಾನ್ ನಲ್ಲಿ, ಗುರುವಾರ 8 ಕೇಂದ್ರ ಸಚಿವರು ಗಂದರ್ ಬಲ್, ಜಮ್ಮು, ರಿಯಾಸಿ, ಬಾರಾಮುಲ್ಲಾ, ಶ್ರೀನಗರ, ರಂಬಾನ್ ನಲ್ಲಿ, ಶುಕ್ರವಾರ ಐವರು ಕೇಂದ್ರ ಸಚಿವರು ಪೂಂಚ್, ಉಧಮ್ ಪುರ, ಬಾರಾಮುಲ್ಲಾ, ರಜೋರಿ ಮತ್ತು ಶ್ರೀನಗರಕ್ಕೆ ಭೇಟಿ ನೀಡಲಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1458