Wednesday, Feb 26 2020 | Time 10:50 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಜೆಎನ್ ಯು ದಾಳಿ; ಉಪಕುಲಪತಿಯೇ ಮಾಸ್ಟರ್ ಮೈಂಡ್-ಕಾಂಗ್ರೆಸ್ ಸಮಿತಿ ವರದಿ

ನವದೆಹಲಿ, ಜ 12 (ಯುಎನ್ಐ) ದೆಹಲಿಯ ಜವಹರ್ ಲಾಲ್ ನೆಹರು ವಿವಿಯ ಆವರಣದಲ್ಲಿ ನಡೆದ ಹಿಂಸಾಚಾರದ ಹಿಂದೆ ಅದರ ಉಪಕುಲಪತಿಯ ಕೈವಾಡವಿದೆ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಅನುಮಾನ ವ್ಯಕ್ತಪಡಿಸಿದೆ.
ಜ. 5ರಂದು ವಿವಿ ಆವರಣದಲ್ಲಿ ಮುಸುಕುಧಾರಿಗಳು ವಿದ್ಯಾರ್ಥಿಗಳ ಮೇಲೆ ನಡೆಸಿದ ದಾಳಿ ಕುರಿತು ತನಿಖೆ ಕೈಗೊಂಡ ಸಮಿತಿ, ಘಟನೆಯಲ್ಲಿ ದಾಳಿ ನಡೆಸಿರುವವರೊಂದಿಗೆ ಉಪಕುಲಪತಿ ಕೈಜೋಡಿಸಿರುವುದು ಕಂಡುಬರುತ್ತಿದೆ. ಅವರೇ ಈ ಘಟನೆಯ ಮಾಸ್ಟರ್ ಮೈಂಡ್ ಎಂದು ಸಮಿತಿಯ ವರದಿ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಘಟನೆ ಕುರಿತು ತನಿಖೆ ನಡೆಸಲು ಮಹಿಳಾ ಕಾಂಗ್ರಸ್ ಮುಖ್ಯಸ್ಥೆ ಸುಷ್ಮಿತಾ ದೇವ್, ಸಂಸದ ಮತ್ತು ಎನ್ ಎಸ್ ಯುಐ ಮಾಜಿ ಅಧ್ಯಕ್ಷೆ ಹಿಬಿ ಏಡನ್, ಸಂಸದ ಸೈಯದ್ ನಾಸೀರ್ ಹುಸೇನ್ ಮತ್ತು ಮಾಜಿ ಎನ್ ಎಸ್ ಯುಐ ಅಧ್ಯಕ್ಷೆ ಅಮೃತಾ ಧವನ್ ಅವರನ್ನೊಳಗೊಂಡ ಸಮಿತಿ ರಚಿಸಿದ್ದರು.
ಉಪ ಕುಲಪತಿ ಎಂ. ಜಗದೀಶ್ ಕುಮಾರ್ ಅವರನ್ನು ತಕ್ಷಣ ಅಮಾನತುಗೊಳಿಸಿ, ಅವರು 2016ರ ಜ. 27ರಂದು ನೇಮಕಗೊಂಡಂದಿನಿಂದ ನಡೆಸಿದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಬೇಕು. ಮತ್ತು ಅವರು ತೆಗೆದುಕೊಂಡಿರುವ ಎಲ್ಲಾ ಆಡಳಿತಾತ್ಮಕ ನೀತಿಗಳನ್ನು ಕೂಡ ತನಿಖೆ ಮಾಡಬೇಕು ಎಂದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಮಾಧ್ಯಮ ಪ್ರತಿನಿಧಿ ದೇವ್, ವರದಿಯನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಲಾಗಿದೆ ಎಂದರು.
ಉಪಕುಲಪತಿಗೆ ಭದ್ರತೆ ಒದಗಿಸುವ ಕಂಪನಿ ಮತ್ತು ಬೋಧಕ ಸಿಬ್ಬಂದಿ ವಿರುದ್ಧ ಕೂಡ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಈ ಎಲ್ಲಾ ಘಟನೆಗಳನ್ನು ತನಿಖೆಗೆ ಸ್ವತಂತ್ರ್ಯ ನ್ಯಾಯಾಂಗ ತನಿಖೆಗೆ ವಹಿಸಬೇಕು. ಘಟನೆ ಕುರಿತು ಮಾಹಿತಿ ದೊರೆತರೂ ತುರ್ತಾಗಿ ಕ್ರಮ ಕೈಗೊಳ್ಳದ ದೆಹಲಿ ಪೊಲೀಸರ ವಿರುದ್ಧ ಕೂಡ ಕ್ರಮ ಕೈಗೊಳ್ಳಬೇಕು ಎಂದು ವರದಿ ಶಿಫಾರಸು ಮಾಡಿದೆ.
ಯುಎನ್ಐ ಎಸ್ಎಚ್ 1832