Friday, Feb 28 2020 | Time 09:29 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಜೆಎನ್ ಯು ದಾಳಿ: ವಿದ್ಯಾರ್ಥಿಗಳ ಪರ ಬೀದಿಗಿಳಿದ ದೀಪಿಕಾ ಪಡುಕೋಣೆ

ನವದೆಹಲಿ, ಜನವರಿ 7(ಯುಎನ್ಐ ) ಜೆಎನ್ ಯು ಮೇಲೆ ನಡೆದ ಗೂಂಡಾ ದಾಳಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕ್ಯಾಂಪಸ್ ನೊಳಗೆ ಹಲ್ಲೆಗೊಳಗಾದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಇದಕ್ಕೂ ಮೊದಲು ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ್ದ , ದೀಪಿಕಾ ಪಡುಕೋಣೆ ಸಾಮಾಜಿಕವಾಗಿ ನಾವು ಯಾರು ಭೀತಿಗೊಂಡಿಲ್ಲ ಎನ್ನುವುದು ಹೆಮ್ಮೆಯ ವಿಚಾರ.
ಜನ ಬೀದಿಗಿಳಿದಿರುವುದು ಒಳ್ಳೆಯ ವಿಚಾರ. ಜನ ತಮ್ಮ ಅಭಿಪ್ರಾಯವನ್ನು ಗಟ್ಟಿಧ್ವನಿಯಲ್ಲಿ ಬೀದಿಯಲ್ಲಿ ಮನೆಯಲ್ಲಿ ವ್ಯಕ್ತಪಡಿಸಲು ಆರಂಭಿಸಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ಅವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ಯುಎನ್ಐ ಕೆಎಸ್ಅರ್ 2130