Wednesday, Feb 26 2020 | Time 10:42 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ

ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ
ಜೆಎನ್‌ಯುನಲ್ಲಿ ರಾಜಕೀಯ ಮಾಡಬಾರದು: ಸ್ಮೃತಿ ಇರಾನಿ

ಅಮೇಥಿ, ಜ.6 (ಯುಎನ್ಐ) ದೆಹಲಿಯ ಜವಾಹರ ಲಾಲ್‌ ನೆಹರೂ (ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ಭುಗಿಲೆದ್ದಿರುವುದು ದುರದೃಷ್ಟಕರ ಎಂದು ಕೇಂದ್ರ ಸಚಿವ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಸೋಮವಾರ ಹೇಳಿದ್ದಾರೆ. ಕಲಿಕೆಯ ಕೇಂದ್ರವನ್ನು ರಾಜಕೀಯದ ಯುದ್ಧಭೂಮಿಯನ್ನಾಗಿ ಮಾಡಬಾರದು ಎಂದು ಹೇಳಿದ್ದಾರೆ.

"ಜೆಎನ್‌ಯುನಲ್ಲಿ ರಾಜಕೀಯವು ವಿದ್ಯಾರ್ಥಿಗಳ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಅದನ್ನು ಮಾಡಬಾರದು. ರಾಜಕೀಯವು ಜೆಎನ್‌ಯುನಲ್ಲಿ ಕೊನೆಗೊಂಡರೆ ಅದು ಅಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನನಗೆ ಖಾತ್ರಿಯಿದೆ ಎಂದು ಸೋಮವಾರ ಇಲ್ಲಿ ನಡೆದ ಜೆಎನ್‌ಯು ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದರು.

ರಾಜಸ್ತಾನದ ಕೋಟಾದಲ್ಲಿ ಶಿಶುಗಳ ಸಾವಿನ ಬಗ್ಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಇರಾನಿ, ರಾಜಸ್ತಾನ ಸರ್ಕಾರದ ವೈಫಲ್ಯ ಉಂಟಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ರಾಜಸ್ಥಾನದ ವೈದ್ಯಕೀಯ ಅಧಿಕಾರಿಗಳು ತಮ್ಮ ಕರ್ತವ್ಯದ ಬಗ್ಗೆ ಪ್ರಾಮಾಣಿಕರಾಗಿ ಮಾಡುತ್ತಿಲ್ಲ. ಆದ್ದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು.

"ಈಗ ರಾಜಸ್ತಾನದ ಕಾಂಗ್ರೆಸ್ ನಾಯಕರು ಕೂಡ ತಮ್ಮ ಕಡೆಯಿಂದ ವೈಫಲ್ಯ ಉಂಟಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಫುರ್ತಸ್‌ಗಂಜ್‌ ಪ್ರದೇಶದಲ್ಲಿ ಇಂದು ಬೆಳಗ್ಗೆ ಕೇಂದ್ರ ಸಚಿವೆ ಇರಾನಿ ಅವರು ಸಮುದಾಯ ಭವನವನ್ನು ಉದ್ಘಾಟಿಸಿದ ಬಳಿಕ ಈ ಹೇಳಿಕೆ ನೀಡಿದರು.

ಯುಎನ್ಐ ಎಎಚ್ 1320