Wednesday, Feb 26 2020 | Time 10:34 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಜೆಎನ್ ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ-ಜಾವಡೇಕರ್

ಜೆಎನ್ ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ-ಜಾವಡೇಕರ್
ಜೆಎನ್ ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ-ಜಾವಡೇಕರ್

ನವದೆಹಲಿ, ಜ 8(ಯುಎನ್‍ಐ)- ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದ ಅವರು, ಪೊಲೀಸರು ವಿಶ್ವವಿದ್ಯಾಲಯದಲ್ಲಿನ ಹಿಂಸಾಚಾರ ಕುರಿತು ತನಿಖೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ.

ದೇಶದ ಯಾವುದೇ ಭಾಗದಲ್ಲಿ ಹಿಂಸಾಚಾರ ನಡೆದರೂ ಅದು ಖಂಡನೀಯ. ಹಿಂಸಾಚಾರಕ್ಕೆ ಜಾಗವಿಲ್ಲ. ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಹೋಗುವ ಶಿಕ್ಷಣಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆಯಲೇಬಾರದು ಎಂದು ಅವರು ಹೇಳಿದ್ದಾರೆ.

ಜೆಎನ್ ಯುನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಬೆಂಬಲ ಸೂಚಿಸಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಂಗಳವಾರ ಸಂಜೆ ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ತೆರಳಿದ್ದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಸತ್ತಾತ್ಮಕ ದೇಶದಲ್ಲಿ ಯಾರು ಎಲ್ಲಿಗೆ ಬೇಕಾದರೂ ಹೋಗಬಹುದು. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದು ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಕುರಿತು ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಪರವಾಗಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಹಿಂಸಾಚಾರದಲ್ಲಿ ಕೆಲ ಪ್ರಾದ್ಯಾಪಕರು ಸೇರಿದಂತೆ 30 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಭಾನುವಾರ ಸಂಜೆ ಮುಸುಕು ಧರಿಸಿದ್ದ ದುಷ್ಕರ್ಮಿಗಳು ಯೋಜಿತ ರೀತಿಯಲ್ಲಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಾಸ್ಟೆಲ್ ಗಳಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು.

ಯುಎನ್‍ಐ ಎಸ್ ಎಲ್ ಎಸ್ 1617