Friday, Feb 28 2020 | Time 09:42 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಜೆಎನ್‌ಯು ಹಿಂಸಾಚಾರ; ಎಚ್‌ಆರ್‌ಡಿ ಕಾರ್ಯದರ್ಶಿಯನ್ನು ಭೇಟಿಯಾದ ಕುಲಪತಿ

ನವದೆಹಲಿ, ಜ.8 (ಯುಎನ್ಐ) ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ಸಂಜೆ ನಡೆದ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿ ಅಮಿತ್ ಖರೆ ಅವರನ್ನು ಬುಧವಾರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಗದೀಶ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು.
ಪ್ರಸ್ತುತ ಶಾಂತವಾಗಿರುವ ವಿಶ್ವವಿದ್ಯಾಲಯದ ಪರಿಸ್ಥಿತಿಯ ಬಗ್ಗೆ ಕುಲಪತಿ ಹಾಗೂ ವಿಶ್ವವಿದ್ಯಾಲಯದ ರೆಕ್ಟರ್ II ಪ್ರಾಧ್ಯಾಪಕ ಸತೀಶ್ ಚಂದ್ರ ಅವರು ಕಾರ್ಯದರ್ಶಿ ಅಮಿತ್ ಖರೆ ಅವರಿಗೆ ಮಾಹಿತಿ ನೀಡಿದರು. ಚಳಿಗಾಲದ ಸೆಮಿಸ್ಟರ್‌ಗೆ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ಜನವರಿ 12 ಕ್ಕೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಪುನಃಸ್ಥಾಪಿಸಲಾಗಿರುವ ವಿಶ್ವವಿದ್ಯಾಲಯದ ಸಂವಹನ ಮತ್ತು ಮಾಹಿತಿ ವ್ಯವಸ್ಥೆಗಳ ಕುರಿತು ಹಾಗೂ ಈಗಿನ ಆನ್‌ಲೈನ್ ವ್ಯವಸ್ಥೆಯ ಬಗ್ಗೆ ಎಚ್‌ಆರ್‌ಡಿ ಕಾರ್ಯದರ್ಶಿಗೆ ಕುಲಪತಿ ಮಾಹಿತಿ ನೀಡಿದರು.
ಸುಮಾರು 3300 ವಿದ್ಯಾರ್ಥಿಗಳು ಆನ್‌ಲೈನ್ ನೋಂದಣಿಗೆ ಶುಲ್ಕ ಪಾವತಿ ಮಾಡಿದ್ದಾರೆ. ಅಲ್ಲದೆ, ಜೆಎನ್‌ಯು ಆಡಳಿತವು ಎಲ್ಲಾ ವಿದ್ಯಾರ್ಥಿಗಳಿಗೆ, ಕ್ಯಾಂಪಸ್‌ನಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಮತ್ತು ಯಾವುದೇ ತಪ್ಪು ಮಾಹಿತಿಯಿಂದ ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದೆ.
ಅದೇ ವೇಳೆ, ಶಾಂತಿ ಕಾಪಾಡಿಕೊಳ್ಳಲು ಮತ್ತು ವಿಶ್ವವಿದ್ಯಾನಿಲಯದ ಸಾಮಾನ್ಯ ಕಾರ್ಯಚಟುವಟಿಕೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಎಂಎಚ್‌ಆರ್‌ಡಿ, ವಿಶ್ವವಿದ್ಯಾಲಯ ಆಡಳಿತಕ್ಕೆ ಸೂಚಿಸಿದೆ.
ಭಾನುವಾರ ಸಂಜೆ, ಮುಖವಾಡ ಧರಿಸಿದ ದುಷ್ಕರ್ಮಿಗಳ ಗುಂಪು ವಿಶ್ವವಿದ್ಯಾಲಯದ ಕೆಲವು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಆಸ್ತಿಯನ್ನು ಧ್ವಂಸ ಮಾಡಿತ್ತು.
ಹಿಂಸಾಚಾರಕ್ಕೆ ಕೆಲವು ದಿನಗಳ ಮೊದಲು, ಹಾಸ್ಟೆಲ್ ಶುಲ್ಕ ಹೆಚ್ಚಳದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ನೋಂದಣಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ವಿಶ್ವವಿದ್ಯಾಲಯದ ಸರ್ವರ್ ಅನ್ನು ವಿದ್ಯಾರ್ಥಿಗಳು ಹಾನಿಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಯುಎನ್ಐ ಎಎಚ್ 1922