Wednesday, Feb 26 2020 | Time 10:24 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಜೆಎನ್‌ಯು ಹಿಂಸಾಚಾರ: ಎಫ್‌ಐಆರ್‌ ದಾಖಲು, 23 ವಿದ್ಯಾರ್ಥಿಗಳಿಗೆ ಏಮ್ಸ್‌ನಲ್ಲಿ ಚಿಕಿತ್ಸೆ

ನವದೆಹಲಿ, ಜ.6 (ಯುಎನ್ಐ) ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಹಿಂಸಾಚಾರಕ್ಕೆ ಸಂಬಂಧಿಸಿ ಸೋಮವಾರ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗಲಭೆ ಮತ್ತು ಸರ್ಕಾರಿ ಆಸ್ತಿಗೆ ಹಾನಿ ಮಾಡುವ ಸೆಕ್ಷನ್‌ಗಳಡಿ ಎಫ್ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರ ಸಂಬಂಧ ಹಲವರು ನೀಡಿದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಜೆಎನ್‌ಯುನಲ್ಲಿ ನಿನ್ನೆ ನಡೆದ ಹಿಂಸಾಚಾರದ ಬಗ್ಗೆ ನಾವು ಸ್ವಯಂಪ್ರೇರಿತರಾಗಿ ಎಫ್‌ಐಆರ್ ದಾಖಲಿಸಿದ್ದೇವೆ. ಸಾಮಾಜಿಕ ಜಾಲತಾಣ ಮತ್ತು ಸಿಸಿಟಿವಿ ದೃಶ್ಯಾವಳಿ ಕೂಡ ತನಿಖೆಯ ಒಂದು ಭಾಗವಾಗಲಿದೆ ಎಂದು ನೈರುತ್ಯ ದೆಹಲಿಯ ಡಿಸಿಪಿ ದೇವೇಂದ್ರ ಆರ್ಯ ತಿಳಿಸಿದ್ದಾರೆ.
ಹಿಂಸಾಚಾರದ ಬಳಿಕ ಏಮ್ಸ್‌ ಆಸ್ಪತ್ರೆಗೆ 23 ವಿದ್ಯಾರ್ಥಿಗಳು ದಾಖಲಾಗಿದ್ದು, ಸೋಮವಾರ ಅವರನ್ನು ಮನೆಗೆ ಕಳುಹಿಸಲಾಗಿದೆ.
ಭಾನುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳ ಗುಂಪು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗೆ ಪ್ರವೇಶಿಸಿ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿತ್ತು. ಇದರಲ್ಲಿ ಜೆಎನ್‌ಯುಎಸ್‌ಯು ಅಧ್ಯಕ್ಷೆ, ಪ್ರಧಾನ ಕಾರ್ಯದರ್ಶಿ ಮತ್ತು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡು ಏಮ್ಸ್ ಗೆ ದಾಖಲಾಗಿದ್ದರು.
ಗಲಭೆಯ ಬಳಿಕ ದೆಹಲಿ ಪೊಲೀಸರು ಕ್ಯಾಂಪಸ್‌ ಒಳಗೆ ಪ್ರವೇಶಿಸಿದ್ದರು.
ಯುಎನ್ಐ ಎಎಚ್ 1250