Wednesday, Feb 26 2020 | Time 10:24 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಜೆಎನ್ ಯು ಹಿಂಸಾಚಾರ; ಪ್ರಕರಣ ಕ್ರೈಂ ವಿಭಾಗಕ್ಕೆ ವರ್ಗಾವಣೆ, ಬೈಜಾಲ್ ಜೊತೆ ಶಾ ಮಾತುಕತೆ

ನವದೆಹಲಿ, ಜ 6 (ಯುಎನ್ ಐ ) ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಭಾನುವಾರ ನಡೆದ ದಾಳಿ ಪ್ರಕರಣಗಳನ್ನು ದೆಹಲಿಯ ಕ್ರೈಂ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಂಬಂಧ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಜೆಎನ್ ಯು ಪ್ರತಿನಿಧಿಗಳೊಂದಿಗೆ ಚರ್ಚಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಜೆನ್ ಯು ಕುಲಪತಿ ಮತ್ತು ರಿಜಿಸ್ಟ್ರಾರ್ ಬೈಜಾಲ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ್ದಾರೆ.
ಭಾನುವಾರ ದೆಹಲಿ ಪೊಲೀಸರಿಗೆ ಪ್ರಕರಣದ ತನಿಖೆ ನಡೆಸುವಂತೆ ಆದೇಶ ನೀಡಿದ್ದ ಅಮಿತ್ ಶಾ, ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಸೂಚಿಸಿದ್ದರು.
ಭಾನುವಾರ ಮುಖಗವಸು ಧರಿಸಿದ 40 ವ್ಯಕ್ತಿಗಳು ಜೆನ್ ಯು ಆವರಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಲಾಠಿ, ರಾಡು ಮತ್ತುಸುತ್ತಿಗೆಗಳಿಂದ ದಾಳಿ ನಡೆಸಿದ್ದು, 30 ಜನರಿಗೆ ಗಾಯಗಳಾಗಿದ್ದವು.
ಯುಎನ್ಐ ಎಸ್ಎಚ್ 1337