Wednesday, Feb 26 2020 | Time 10:20 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಜೆಎನ್‌ಯು ಹಿಂಸಾಚಾರ; ವಾಟ್ಸಪ್‌ ಗ್ರೂಪ್‌ನ 34 ಮಂದಿಯನ್ನು ಪ್ರಶ್ನಿಸಲಿರುವ ಪೊಲೀಸರು

ನವದೆಹಲಿ, ಜ.14 (ಯುಎನ್ಐ) ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಗಲಭೆಗೆ ಸಂಚು ರೂಪಿಸಿದ ಮೂವತ್ತನಾಲ್ಕು ಮಂದಿಗೆ ದೆಹಲಿ ಪೊಲೀಸರು ಶೀಘ್ರದಲ್ಲೇ ನೋಟಿಸ್ ನೀಡಲಿದ್ದು, ಈಗಾಗಲೇ ಎಂಟು ಜನರನ್ನು ಪ್ರಶ್ನಿಸಲಾಗಿದೆ.
ಇದಕ್ಕೂ ಮೊದಲು ದೆಹಲಿ ಪೊಲೀಸರು ಜನವರಿ 1 ಮತ್ತು 5 ರ ನಡುವೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರನ್ನು ಗುರುತಿಸಿದ್ದರು, ಅದರಲ್ಲಿ ಅವರು ಈಗಾಗಲೇ ಮೂರು ಜನರನ್ನು ಪ್ರಶ್ನಿಸಿದ್ದಾರೆ.
ಈಗ 34 ಜನರಿಗೆ ನೋಟಿಸ್ ನೀಡಿದರೆ ಪೊಲೀಸರ ತನಿಖೆಗೆ ಒಳಪಡುವ ಒಟ್ಟು ಜನರ ಸಂಖ್ಯೆ 43 ಆಗಲಿದೆ.
ದೆಹಲಿ ಹೈಕೋರ್ಟ್, ಅರ್ಜಿಯನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ, ಎರಡು ವಾಟ್ಸಾಪ್ ಗ್ರೂಪ್‌ಗಳಲ್ಲಿದ್ದ ಜನರ ದೂರವಾಣಿ ಸಂಖ್ಯೆಗಳಿಂದ ಸಂದೇಶಗಳ ಬಗ್ಗೆ ಮಾಹಿತಿ ಪಡೆಯಲು ದೆಹಲಿ ಪೊಲೀಸರಿಗೆ ಸೂಚಿಸಿದೆ.
ಈ ಗುಂಪುಗಳ 34 ಜನರ ವಿಚಾರಣೆಗೆ ದೆಹಲಿ ಪೊಲೀಸರು ನೋಟಿಸ್ ನೀಡಲಿದ್ದಾರೆ ಎಂದು ಇಲ್ಲಿನ ಅಧಿಕೃತ ಮೂಲಗಳು ತಿಳಿಸಿವೆ.
ಈ 34 ಜನರಲ್ಲಿ ಖಾಸಗಿ ಟೆಲಿವಿಷನ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ನಾಲ್ಕು ಜನರು ಕೂಡ ಇದ್ದಾರೆ.
ಜೆಎನ್‌ಯು ಹಿಂಸಾಚಾರದ ವಿವಿಧ ಘಟನೆಗಳಿಗೆ ಸಂಬಂಧಿಸಿದಂತೆ ಇದುವರೆಗೆ ಎಂಟು ಜನರನ್ನು ಪ್ರಶ್ನಿಸಲಾಗಿದೆ.
ಯುಎನ್ಐ ಎಎಚ್ 2026