Friday, Feb 28 2020 | Time 08:51 Hrs(IST)
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಜೆಎನ್ ಯು ಹಿಂಸಾಚಾರ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

ನವದೆಹಲಿ, ಜನವರಿ 10 (ಯುಎನ್ಐ ) ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಳೆದ ವಾರ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಜೆಎನ್ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ 9 ಶಂಕಿತರ ರೇಖಾ ಚಿತ್ರ ಬಿಡುಗಡೆ ಮಾಡಿದ್ದಾರೆ.
ಪೊಲೀಸರು ಆರೋಪಿಗಳೆಂದು ಪತ್ತೆಹಚ್ಚಿದವರ ಪೈಕಿ ಬಹುತೇಕ ಮಂದಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗೆ ಸೇರಿದವರಾಗಿದ್ದಾರೆ. ಆದರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಭಾನುವಾರ ದಾಳಿ ನಡೆಸಿದ ಮುಸುಕುಧಾರಿ, ಗೂಂಡಾಗಳ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಮುಸುಕುಧಾರಿ ಗೂಂಡಾಗಳು ದಾಳಿ ನಡೆಸುವ ಮುನ್ನ ಹಾಸ್ಟೆಲ್ ಶುಲ್ಕ ಏರಿಕೆಗೆ ಕುರಿತಾಗಿ ವಿದ್ಯಾರ್ಥಿಗಳ ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿಂತೆ ಪೊಲೀಸ್ ಅಧಿಕಾರಿಗಳು, ಚುಂಚುನ್ ಕುಮಾರ್, ಪಂಕಜ್ ಮಿಶ್ರಾ, ಐಶೆ ಘೋಷ್, ವಾಸ್ಕರ್ ವಿಜಯ್, ಸುಚೇತಾ ತಾಲೂಕ್ದಾರ್, ಪ್ರಿಯಾ ರಂಜನ್, ದೋಲನ್ ಸಾವಂತ್, ಯೋಗೇಂದ್ರ ಭಾರಧ್ವಾಜ್ ಹಾಗೂ ವಿಕಾಸ್ ಪಟೇಲ್ರನ್ನು ಆರೋಪಿಗಳನ್ನಾಗಿ ಪೊಲೀಸರು ಹೆಸರಿಸಿದ್ದಾರೆ.
ಐಶೆ ಘೋಷ್ ಎಡಪಂಥೀಯರ ನಿಯಂತ್ರಣದ ಜೆಎನ್ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾಗಿದ್ದರೆ, ಯೋಗೇಂದ್ರ ಭಾರಧ್ವಾಜ್ ಹಾಗೂ ವಿಕಾಸ್ ಪಟೇಲ್ ಅವರು ಸಂಘಪರಿವಾರದ ಜೊತೆ ನಂಟು ಹೊಂದಿರುವ ಎಬಿವಿಪಿಯ ಸದಸ್ಯರೆಂದು ಗುರುತಿಸಲಾಗಿದೆ.
ಹಾಸ್ಟೆಲ್ ಶುಲ್ಕ ಏರಿಕೆಗೆ ಸಂಬಂಧಿಸಿ ಪ್ರತಿಭಟನೆ ನಡೆಸುತ್ತಿದ್ದ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಜೆಎನ್ಯು ವಿವಿಯ ಸರ್ವರ್ ಕೊಠಡಿಗೆ ನುಗ್ಗಿ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ತಡೆಯೊಡ್ಡಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಎಡಪಂಥೀಯ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಬೆಂಬಲಿಗರ ನಡುವೆ ಭಾರಿ ಘರ್ಷಣೆ ನಡೆದಿತ್ತು..
ಐಶೆ ಘೋಷ್ ಅವರ ಮೇಲೆ ಮುಸುಕುಧಾರಿ ಗೂಂಡಾಗಳು ಹಲ್ಲೆ ಮಾಡಿದ್ದರು ನಂತರ ತೀವ್ರ ರಕ್ತಸ್ರಾವದೊಂದಿಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅವರ ವಿರುದ್ಧ ಎರಡು ಎಫ್ಐಆರ್ ಪ್ರಕರಣ ದಾಖಲಿಸಲಾಗಿತ್ತು .
ಸಿಸಿಟಿವಿ ವಿಡಿಯೋ, ಅಸಲಿ ವಿಡಿಯೋ ರೆಕಾರ್ಡಿಂಗ್ ಗಳು ಹಾಗೂ ಸಾಕ್ಷಿಗಳ ಅಭಾದ ಕಾರಣ ಆರೋಪಿಗಳನ್ನು ಸ್ಪಷ್ಟವಾಗಿ ಗುರುತಿಸಲು ಕಷ್ಟವಾಗುತ್ತಿದೆ ಎಂದು ಪೊಲೀಸರು ಳುತ್ತಿದ್ದಾರೆ.
ಯುಎನ್ಐ ಕೆಎಸ್ಆರ್ 2203