Wednesday, Feb 26 2020 | Time 10:43 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಜೆಎನ್‌ಯು ಹಿಂಸಾಚಾರ; 10 ನಿಮಿಷಗಳಲ್ಲೇ ಯೋಗೇಂದ್ರ ಯಾದವ್ ಅಲ್ಲಿಗೆ ಹೇಗೆ ತಲುಪಿದರು ? - ಬಿಜೆಪಿ ಪ್ರಶ್ನೆ

ನವದೆಹಲಿ, ಜ.6 (ಯುಎನ್‌ಐ) ಇಲ್ಲಿನ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರವನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ತೀವ್ರವಾಗಿ ಖಂಡಿಸಿದ್ದು, ದುಷ್ಕರ್ಮಿಗಳ ಕ್ರಮಗಳು 'ಹತಾಶ ಪ್ರಯತ್ನಗಳನ್ನು' ತೋರಿಸುತ್ತವೆ ಎಂದು ಹೇಳಿದೆ.
ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿನ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಜನರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ಮುಖಂಡ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
ಜೆಎನ್‌ಯು ಕ್ಯಾಂಪಸ್‌ನಲ್ಲಿನ ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ವಿದ್ಯಾರ್ಥಿಗಳನ್ನು ಬಂದೂಕಿನಂತೆ ಬಳಸಲು ನಿರ್ಧರಿಸಿರುವ ಅರಾಜಕತೆಯ ಶಕ್ತಿಗಳ ಹತಾಶ ಪ್ರಯತ್ನವಾಗಿದ್ದು, ಕುಗ್ಗುತ್ತಿರುವ ರಾಜಕೀಯ ವರ್ಚಸ್ಸನ್ನು ಹೆಚ್ಚಿಸಲು ಅಶಾಂತಿಯನ್ನು ಸೃಷ್ಟಿಸಲಾಗುತ್ತಿದೆ. ವಿಶ್ವವಿದ್ಯಾಲಯಗಳು ಕಲಿಕೆಯ ಮತ್ತು ಶಿಕ್ಷಣದ ಸ್ಥಳಗಳಾಗಿ ಉಳಿಯಬೇಕು ಎಂದು ಬಿಜೆಪಿ ಟ್ವೀಟ್ ಮಾಡಿದೆ.
"ಜೆಎನ್‌ಯುನಲ್ಲಿನ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಇದನ್ನು ತನಿಖೆ ಮಾಡಬೇಕಾಗಿದೆ" ಎಂದು ಕೇಂದ್ರ ಸಚಿವ ಜಾವಡೇಕರ್ ಹೇಳಿದರು.
ಕಾಂಗ್ರೆಸ್, ಎಎಪಿ, ಕಮ್ಯುನಿಸ್ಟರು ಮತ್ತು ಇತರ ಕೆಲವು ಶಕ್ತಿಗಳು ದೇಶಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ಹಿಂಸಾಚಾರದ ವಾತಾವರಣವನ್ನು ಸೃಷ್ಟಿಸಲು ಬಯಸುತ್ತವೆ ಎಂದು ಅವರು ದೂರಿದರು.
ಹೊಸದಾಗಿ ಉದಯಗೊಂಡಿರುವ ಸ್ವರಾಜ್ ಅಭಿಯಾನ ಪಕ್ಷದ ಯೋಗೇಂದ್ರ ಯಾದವ್ ಅವರಂತಹ ನಾಯಕರು ಘಟನೆ ನಡೆದ ಹತ್ತೇ ನಿಮಿಷಗಳಲ್ಲಿ ಜೆಎನ್‌ಯು ಕ್ಯಾಂಪಸ್‌ಗೆ ಹೇಗೆ ತಲುಪುತ್ತಾರೆ ? ಎಂದು ಅವರು ಪ್ರಶ್ನಿಸಿದರು.
ನೋಂದಣಿ ಪ್ರಕ್ರಿಯೆಯನ್ನು ಯಾರು ತಡೆಯುತ್ತಿದ್ದಾರೆ, ಯೋಗೇಂದ್ರ ಯಾದವ್ ಮತ್ತು ಇತರ ನಾಯಕರು ಹತ್ತು ನಿಮಿಷಗಳಲ್ಲಿ ಹೇಗೆ ಅಲ್ಲಿಗೆ ತಲುಪುತ್ತಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಬೇಕಾಗಿದೆ ..... ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಜನರನ್ನು ಬಹಿರಂಗಪಡಿಸಬೇಕು ಎಂದು ಅವರು ಹೇಳಿದರು.
ಪಕ್ಷದ ಮುಖ್ಯಸ್ಥ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ನಾಯಕರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿತ ಬೆಳವಣಿಗೆಗಳ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಭಾನುವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮುಖಕ್ಕೆ ಬಟ್ಟೆ ಕಟ್ಟಿ ಕ್ಯಾಂಪಸ್‌ನೊಳಗೆ ಪ್ರವೇಶಿಸಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷಾ ಘೋಷ್ ಸೇರಿದಂತೆ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿತ್ತು.
ಜೆಎನ್‌ಯು ಕ್ಯಾಂಪಸ್‌ನೊಳಗಿನ ಹಿಂಸಾಚಾರದ ಘಟನೆಗಳನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಖಂಡಿಸಿದ್ದು, ಇದು ದುರದೃಷ್ಟಕರ ಮತ್ತು ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದ್ದಾರೆ.
ಎಲ್ಲರೂ ಶಾಂತಿ ಕಾಪಾಡುವಂತೆ ಅವರು ಮನವಿ ಮಾಡಿದ್ದಾರೆ.
ಅಮಿತ್‌ ಶಾ ಅವರು ಈಗಾಗಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅನಿಲ್ ಬೈಜಾಲ್ ಮತ್ತು ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುಎನ್ಐ ಎಎಚ್ 1215