Monday, Jun 1 2020 | Time 02:46 Hrs(IST)
National Share

ಜ್ಯೋತಿ ಸಾಧನೆ: ಇವಾಂಕಾ ಟ್ರಂಪ್ ಫುಲ್ ಖುಷ್

ನವದೆಹಲಿ, ಮೇ 23 (ಯುಎನ್ಐ) ಗುರುಗ್ರಾಮದಲ್ಲಿ ಕರೋನ , ಲಾಕ್ಡೌನ್ನಿಂದಾಗಿ ಸಿಕ್ಕಿಹಾಕಿಕೊಂಡಿದ್ದ ಅನಾರೋಗ್ಯ ತಂದೆಯನ್ನು ಸೈಕಲ್ ಮೇಲೆ ಕೂರಿಸಿಕೊಂಡು 1, 200 ಕಿಲೋಮೀಟರ್ ಮಾಡಿದ್ದ ಜ್ಯೋತಿಕುಮಾರಿಗೆ ಹತ್ತು ಹಲವು ಕಡೆಯಿಂದ ಅಭಿನಂದನೆಗಳ ಸುರಿಮಳೆಯಾಗಿದೆ .
ಹಲವರು ಆಕೆಯ ಸಾಹಸವನ್ನು ಹಲವರು ಮೆಚ್ಚಿ ಅಭಿನಂದನೆ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಜ್ಯೀತಿಯ ಸಾಧನೆಯ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

7 ದಿನಗಳ ಕಾಲ ಬೈಸಿಕಲ್ ಮೇಲೆ ಪ್ರಯಾಣ ಮಾಡಿದ್ದ ಜ್ಯೋತಿಕುಮಾರಿ ಅವರ ಸಾಹಸ, ಧೈರ್ಯ, ಮೇಲಾಗಿ ತಂದೆ ಮೇಲಿನ ಪ್ರೀತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸಳೆದಿತ್ತು ಗಮನಿಸಿರುವ ಟ್ರಂಪ್ ಪುತ್ರಿ ಇವಾಂಕಾ ಈ ಕುರಿತು ಟ್ವೀಟ್ ಮಾಡಿ ಆಕೆಯ ಸಾಹಸ ಮತ್ತು ತಂದೆಯ ಮೇಲಿನ ಪ್ರೀತಿಯನ್ನು ಬಹಳ ಮುಕ್ತವಾಗಿ ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವಾಂಕಾ ಅವರ ಟ್ವೀಟ್ ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.
ಯುಎನ್ಐ ಕೆ ಎಸ್ಆರ್ 1228
More News
ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ

31 May 2020 | 9:35 PM

ನವದೆಹಲಿ, ಮೇ 31 (ಯುಎನ್‌ಐ) ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳ ಮೇಲೆ ರೂಪುಗೊಂಡ ಕಡಿಮೆ ಒತ್ತಡ ಪ್ರದೇಶವು ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಜೂನ್ 3 ರೊಳಗೆ ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ ಗೆ ಬೀಸುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

 Sharesee more..
ದೇಶದಲ್ಲಿ ಒಂದೇ ದಿನ 8380 ಕೊರೋನಾ ಸೋಂಕು ಪತ್ತೆ: ಸಾವಿನ ಸಂಖ್ಯೆ 5164ಕ್ಕೆ ಏರಿಕೆ

ದೇಶದಲ್ಲಿ ಒಂದೇ ದಿನ 8380 ಕೊರೋನಾ ಸೋಂಕು ಪತ್ತೆ: ಸಾವಿನ ಸಂಖ್ಯೆ 5164ಕ್ಕೆ ಏರಿಕೆ

31 May 2020 | 9:26 PM

ನವದೆಹಲಿ, ಮೇ 31 (ಯುಎನ್ಐ) ರಾಷ್ಟ್ರವ್ಯಾಪಿ ಲಾಕ್‌ಡೌನ್ 4.0 ಭಾನುವಾರ ಮುಕ್ತಾಯಗೊಳ್ಳುತ್ತಿದ್ದಂತೆ, ದೇಶದಲ್ಲಿ ಒಂದೇ ದಿನ ಕೊರೋನಾ ಸೋಂಕು 8380 ಜನರಲ್ಲಿ ಕಂಡುಬಂದಿದೆ.

 Sharesee more..