Monday, Aug 3 2020 | Time 22:51 Hrs(IST)
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
  • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
  • ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ
Special Share

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್. ಸುರೇಶ್ ಕುಮಾರ್

ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್. ಸುರೇಶ್ ಕುಮಾರ್
ಜುಲೈ ೧೮ ರಂದು ದ್ವಿತೀಯ ಪಿಯುಸಿ ಫಲಿತಾಂಶ; ಎಸ್. ಸುರೇಶ್ ಕುಮಾರ್

ಕುಕ್ಕೆ ಸುಬ್ರಮಣ್ಯ,ಜುಲೈ ೧೨(ಯುಎನ್‌ಐ) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಗಳು ಜುಲೈ ೧೮ ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ತಿಳಿಸಿದ್ದಾರೆ.

ಕುಕ್ಕೆ ಸುಬ್ರಮಣ್ಯ ದೇಗಲಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಾಳೆಯಿಂದ ಆರಂಭಗೊಳ್ಳಲಿದ್ದು, ಜುಲೈ ೩೧ರೊಳಗೆ ಪೂರ್ಣಗೊಳ್ಳಲಿದ್ದು ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ ಎಂದು ವಿವರಿಸಿದರು.

ಆನ್ ಲೈನ್ ಶಿಕ್ಷಣದ ಬಗ್ಗೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೆಚ್ಚಿನ ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶಗಳಲ್ಲಿದ್ದು, ಆನ್ ಲೈನ್ ಶಿಕ್ಷಣ ಕಲ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ಸೌಲಭ್ಯಗಳು ಪೂರಕವಾಗಿಲ್ಲ ಹಾಗಾಗಿ ಆನ್ ಲೈನ್ ಶಿಕ್ಷಣದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಆನ್ ಲೈನ್ ಶಿಕ್ಷಣ ಖಾಸಗಿ ಶಾಲೆಗಳ ಕಾರ್ಯಕ್ರಮ ಎಂದು ಹೇಳಿದ ಸಚಿವರು, ಶಿಕ್ಷಣದಲ್ಲಿ ತಂತ್ರಜ್ಞಾನ ಹೆಚ್ಚಿನ ಬಳಕೆಗೆ ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ. ಸೇತು ಬಂಧ ತರಗತಿಗಳು ದೂರದರ್ಶನದ ಚಂದನ ವಾಹಿನಿಯಲ್ಲಿ ಸದ್ಯದಲ್ಲಿ ಆರಂಭಗೊಳ್ಳಲಿವೆ. ೮ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಪಾಠಗಳ ಬಗ್ಗೆ ಸೇತು ಬಂಧ ತರಗತಿಗಳಲ್ಲಿ ಮಾಹಿತಿ ನೀಡಲಾಗುವುದು ಎಂದರು.

ಯುಎನ್‌ಐ ಕೆವಿಆರ್ ೧೮೦೨