Friday, Dec 6 2019 | Time 21:21 Hrs(IST)
 • ಎನ್ ಕೌಂಟರ್ ನಡೆಸಿದ ಪೊಲೀಸರಿಗೆ ಎನ್ ಹೆಚ್ ಆರ್ ಸಿ ನೋಟೀಸ್
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
Karnataka Share

ಜು.20 ಕ್ಕೆ ಸಂಗೀತ ನಿರ್ದೇಶಕ ಆರ್.ಡಿ.ಬರ್ಮನ್ ಸ್ಮರಣಾರ್ಥ ಸಂಗೀತ ಕಾರ್ಯಕ್ರಮ

ಬೆಂಗಳೂರು, ಜುಲೈ 17 (ಯುಎನ್ಐ) ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಆರ್.ಡಿ.ಬರ್ಮನ್ ಅವರ 80ನೇ ಜನ್ಮದಿನಾಚರಣೆ ಅಂಗವಾಗಿ ಜು.20 ರಂದು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಸಂಸ್ಥೆಯ ಆಗ್ನೇಯ ವಿಭಾಗದ ಅಧ್ಯಕ್ಷ ಡಾ.ಶಂಕರ್ ನಾರಾಯಣ್ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಮುಂಬೈ, ಚೆನ್ನೈ ಹಾಗೂ ಬೆಂಗಳೂರಿನಿಂದ ಪ್ರಖ್ಯಾತ ಸಂಗೀತಗಾರರು ಹಾಗೂ ಬರ್ಮನ್ ಅವರ ಶಿಷ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ 500 ರಿಂದ 2000 ರೂ.ವರೆಗೆ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಸಂಗ್ರಹವಾದ ಹಣದಿಂದ ಸೌಲಭ್ಯವಂಚಿತ ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ವಿಜ್ಞಾನ ಉಪಕರಣಗಳನ್ನು ನೀಡಲಾಗುತ್ತದೆ ಎಂದರು. ಮಕ್ಕಳಲ್ಲಿ ವೈಜ್ಞಾನಿಕ ಕಲಿಕೆಯ ವಾತಾವರಣ ಸೃಷ್ಟಿ ಮಾಡಲು ಈ ಉಪಕರಣಗಳು ಸಹಕಾರಿಯಾಗಲಿವೆ. ಈಗಾಗಲೇ 12 ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸಿದ್ದು, ಮುಂದೆ 100 ಸರ್ಕಾರಿ ಶಾಲೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಹೆಚ್ಚಿನ ಮಾಹಿತಿಗೆ 9844061321 ಗೆ ಸಂಪರ್ಕಿಸಲು ಕೋರಿದ್ದಾರೆ.

ಯುಎನ್ಐ ಡಿಸಿ ಎಸ್ಎ 1557
More News