Wednesday, Feb 26 2020 | Time 10:25 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ಜ 26ರಂದು ಎಲ್ಲ 300 ಮಂಡಲಗಳಲ್ಲಿ ತ್ರಿವರ್ಣ ಧ್ವಜಾರೋಹಣಕ್ಕೆ ಬಿಜೆಪಿ ಭರದ ಸಿದ್ಧತೆ

ಬೆಂಗಳೂರು, ಜ 24(ಯುಎನ್‍ಐ)- ಗಣರಾಜ್ಯೋತ್ಸವ ದಿನವಾದ ಜ 26ರಂದು ರಾಜ್ಯದ ಎಲ್ಲ 300 ಮಂಡಲಗಳಲ್ಲಿ ತ್ರಿವರ್ಣ ಧ್ವಜಾರೋಹಣ ನಡೆಸುವ ಕಾರ್ಯಕ್ರಮದ ಸಿದ್ಧತೆಯ ಭಾಗವಾಗಿ ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಎಲ್ಲ ಜಿಲ್ಲೆಗಳ ಪಕ್ಷದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಪರ ಅಭಿಯಾನದ ಸಂಚಾಲಕ ಎನ್.ರವಿಕುಮಾರ್ ಅವರು ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಆಯಾ ಜಿಲ್ಲೆಗಳ ಮತ್ತು ಮಂಡಲಗಳಲ್ಲಿ ಜ 26ರಂದು ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮಗಳ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.
ಪ್ರತಿ ಬೂತ್‍ಗೆ ಅಗತ್ಯವಿರುವ ಧ್ವಜಗಳ ಬಗ್ಗೆ, “ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು” ಪುಸ್ತಕಗಳನ್ನು ಮತ್ತು ಧ್ವಜಗಳನ್ನು ಬೂತ್‍ಗಳಿಗೆ ತಲುಪಿಸುವ ಯೋಜನೆ ಕುರಿತು, ಪ್ರತಿ ಬೂತ್‍ನಲ್ಲಿ ಭಾಷಣಕಾರರ ಕುರಿತು, ಧ್ವಜ ಇಳಿಸುವ ಕುರಿತು, ಮಂಡಲಗಳಲ್ಲಿ ಎಲ್ಲ ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಓಡಾಡುವ ಕುರಿತು ರಾಜ್ಯದ 37 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಪ್ರಮುಖರೊಂದಿಗೆ ವಿಡಿಯೋ ಸಂವಾದದ ಮೂಲಕ ಯೋಜನೆ ರೂಪಿಸಲಾಯಿತು. ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಅಭಿಯಾನ ಕುರಿತು ಯಾವುದೇ ಮಾಹಿತಿ ಪಡೆಯಲು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಪ್ರತ್ಯೇಕ ವಿಭಾಗವನ್ನು ಸ್ಥಾಪಿಸಲಾಗಿದೆ. ಕಾರ್ಯಕರ್ತರು ಈ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಎನ್.ರವಿಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1801