Monday, Jul 22 2019 | Time 07:08 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
Special Share

ಟಿಆರ್‌ಎಸ್‌ ಸರ್ಕಾರದಿಂದ ಪ್ರತಿವರ್ಷ 1,000 ಪ್ರಾಥಮಿಕ ಶಾಲೆಗಳಿಗೆ ಬೀಗ: ಕಾಂಗ್ರೆಸ್ ಆರೋಪ

ಹೈದರಾಬಾದ್, ಜುಲೈ 12 (ಯುಎನ್‌ಐ) ತೆಲಂಗಾಣದಲ್ಲಿ ಟಿಆರ್‌ಎಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ 1,000 ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧಿಕೃತ ವಕ್ತಾರ ಸೈಯದ್ ನಿಜಾಮುದ್ದೀನ್ ಶುಕ್ರವಾರ ಆರೋಪಿಸಿದ್ದಾರೆ.
ಇಲ್ಲಿನ ಗಾಂಧಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್‌ಎಸ್ ಸರ್ಕಾರ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು, ವಿಶೇಷವಾಗಿ ಪ್ರಾಥಮಿಕ ಶಾಲೆಗಳನ್ನು ಸಂಪೂರ್ಣವಾಗಿ ಹಾಳು ಮಾಡಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಕೆಲ ನೂರು ವಸತಿ ಶಾಲೆಗಳಿಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದಾರೆ. ಆದರೆ ತಮ್ಮ ಸರ್ಕಾರ ನೆಪಗಳನ್ನು ನೀಡಿ ಸಾವಿರಾರು ಪ್ರಾಥಮಿಕ ಶಾಲೆಗಳನ್ನು ಮುಚ್ಚುತ್ತಿರುವ ಅಂಶವನ್ನು ಮರೆಮಾಚುತ್ತಿದ್ದಾರೆ ಎಂದು ದೂರಿದ್ದಾರೆ.
'ತೆಲಂಗಾಣ ರಾಜ್ಯ ರಚನೆಯ ಸಂದರ್ಭದಲ್ಲಿ 2013-2014ರಲ್ಲಿ 28,822 ಸರ್ಕಾರಿ ಶಾಲೆಗಳು ಇದ್ದವು. ಈ ಸಂಖ್ಯೆ 2018-19ರಲ್ಲಿ 26,040 ಕ್ಕೆ ಇಳಿಯಿತು. ಇದೀಗ ಇನ್ನೂ 4,000 ಶಾಲೆಗಳನ್ನು ಮುಚ್ಚಲು ಯೋಚಿಸುತ್ತಿದೆ. ಈ ಶಾಲೆಗಳನ್ನು ಶಾಶ್ವತವಾಗಿ ಮುಚ್ಚುವುದನ್ನು ಟಿಆರ್‌ಎಸ್‌ ಸರ್ಕಾರ ಸಮರ್ಥಿಸಿಕೊಳ್ಳಬಹುದೇ.' ಎಂದು ಅವರು ಪ್ರಶ್ನಿಸಿದ್ದಾರೆ.
ಶಿಕ್ಷಣದ ಜಿಲ್ಲಾ ಮಾಹಿತಿ ವ್ಯವಸ್ಥೆ (ಡಿಎಸ್‌ಐಇ)ಯ ಇತ್ತೀಚಿನ ವರದಿಯನ್ನು ಉಲ್ಲೇಖಿಸಿದ ನಿಜಾಮುದ್ದೀನ್, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕೇವಲ ಮೂರು ವರ್ಷಗಳಲ್ಲಿ 1 ಲಕ್ಷಕ್ಕೂ ಕಡಿಮೆಯಾಗಿದೆ. ಆದರೆ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಗಮನಾರ್ಹವಾಗಿ ಹೆಚ್ಚಾಗಿದೆ. 2014-15ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 22.87 ಲಕ್ಷ ವಿದ್ಯಾರ್ಥಿಗಳಿದ್ದರು. ಆದರೆ ಈ ಸಂಖ್ಯೆ 2016-17ರಲ್ಲಿ 21.72 ಲಕ್ಷಕ್ಕೆ ಇಳಿದಿದೆ. ಅಂದರೆ 114,739 ರಷ್ಟು ಇಳಿಕೆ ದಾಖಲಾಗಿದೆ ಎಂದು ಅಂಕಿ ಅಂಶ ಸಹಿತ ವಿವರಿಸಿದ್ದಾರೆ.
ಯುಎಎನ್‌ಐ ಎಸ್‌ಎಲ್‌ಎಸ್‌ ಕೆವಿಆರ್ 1738