Friday, Dec 6 2019 | Time 21:06 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
International Share

ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್

ವಾಷಿಂಗ್ಟನ್, ಜುಲೈ 22 (ಯುಎನ್ಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮುಖಾಮುಖಿ ಭೇಟಿಗಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಸೋಮವಾರ ಶ್ವೇತಭವನಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಅಫ್ಘಾನಿಸ್ತಾನದ ಉಗ್ರರ ದಾಳಿ ಕುರಿತ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ, ಉಭಯ ರಾಷ್ಟ್ರಗಳ ಸಂಬಂಧವನ್ನು ಬಲಪಡಿಸುವ ಉದ್ದೇಶವನ್ನು ಇಮ್ರಾನ್ ಖಾನ್ ಹೊಂದಿದ್ದಾರೆ ಎಂದು ಬಿಬಿಸಿ ವಾಹಿನಿ ವರದಿ ಮಾಡಿದೆ.
ಕಳೆದ ವರ್ಷವಷ್ಟೇ ಪಾಕಿಸ್ತಾನ ಸುಳ್ಳು ಹಾಗೂ ವಂಚನೆಯ ರಾಷ್ಟ್ರ ಎಂದು ಆರೋಪಿಸಿದ್ದ ಟ್ರಂಪ್ , ಪಾಕ್ ಗೆ ಒದಗಿಸುತ್ತಿದ್ದ ಭದ್ರತಾ ನೆರವನ್ನು ಕಡಿತಗೊಳಿಸಿದ್ದರು.
ಪಾಕಿಸ್ತಾನದ ಮೇಲೆ ಅಮೆರಿಕ ನೇತೃತ್ವದ ತಂಡ ನಡೆಸಿದ ಭಯೋತ್ಪಾದನೆ ವಿರುದ್ಧದ ಯುದ್ಧದಿಂದ ಪಾಕಿಸ್ತಾನಕ್ಕೆ ಉಂಟಾಗಿರುವ ನಷ್ಟಕ್ಕೆ ಹೋಲಿಸಿದರೆ, ಅಮೆರಿಕದ ನೆರವು ಅಲ್ಪಪ್ರಮಾಣದ್ದು ಎಂದು ಖಾನ್ ಈ ಹಿಂದೆ ನುಡಿದಿದ್ದರು.
ವರ್ಷದ ಹಿಂದಷ್ಟೇ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಇಮ್ರಾನ್ ಖಾನ್, ಅಮೆರಿಕದೊಂದಿಗೆ ಪರಸ್ಪರ ಲಾಭದಾಯಕ ಸಂಬಂಧಕ್ಕೆ ಕರೆ ನೀಡಿದ್ದರು. ಆದರೂ, ಅವರು ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕ ತಂಡಗಳ ವಿರುದ್ಧದ ಅಮೆರಿಕದ ಡ್ರೋನ್ ದಾಳಿಯನ್ನು ಖಂಡಿಸಿದ್ದರು.
ಅಮೆರಿಕ ಈಗಾಗಲೇ ತಾಲಿಬಾನ್ ಉಗ್ರ ತಂಡಕ್ಕೆ ಅಘ್ಪಾನಿಸ್ತಾನದಿಂದ ಹಿಂದೆ ಸರಿಯುವಂತೆ ಎಚ್ಚರಿಕೆ ಸಂದೇಶ ರವಾನಿಸಿದೆ. ಈ ತಂಡಕ್ಕೆ ಪಾಕಿಸ್ತಾನ ನೆರವು ಒದಗಿಸುತ್ತಿದೆ ಎಂಬ ಆರೋಪವಿದೆ.
ಉಭಯ ರಾಷ್ಟ್ರಗಳ ನಾಯಕರು ಭಯೋತ್ಪಾದನಾ ನಿಗ್ರಹ ಹಾಗೂ ರಕ್ಷಣಾ ವಿಷಯ ಮಾತ್ರವಲ್ಲದೆ, ವ್ಯಾಪಾರ ಹಾಗೂ ಹೂಡಿಕೆಯ ಕುರಿತು ಕೂಡ ಚರ್ಚಿಸುವ ಸಾಧ್ಯತೆಯಿದೆ.
2017ರಲ್ಲಿ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಾಕಿಸ್ತಾನದ ವಿರುದ್ಧ ಕಠಿಣ ನಿಲುವು ತಾಳಿದ್ದರು. ಪಾಕಿಸ್ತಾನ ಇಸ್ಲಾಮ್ ಉಗ್ರರನ್ನು ಬೆಂಬಲಿಸುತ್ತದೆ ಎಂದು ಆರೋಪಿಸಿದ್ದರು. ಆದರೆ, ಈ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತ್ತು.
ಕಳೆದ ನವೆಂಬರ್ ನಲ್ಲಿ ಟ್ರಂಪ್, ಅಮೆರಿಕದ 9/11 ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಒಸಾಮಾ ಬಿನ್ ಲಾಡೆನ್ ಅಮೆರಿಕದ ಸೇನೆಗೆ ಸೆರೆಸಿಕ್ಕು ಹತನಾಗುವ ಮುನ್ನ ಪಾಕಿಸ್ತಾನದಲ್ಲಿ ನೆಲೆಸಿದ್ದನು ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಖಾನ್, ಮೊದಲು ಸರಿಯಾದ ದಾಖಲೆಗಳನ್ನು ಪಡೆದುಕೊಳ್ಳಿ. ಯಾವ ದೇಶ ಭಯೋತ್ಪಾದನೆ ನಿಗ್ರಹಕ್ಕೆ ಅತಿ ಹೆಚ್ಚು ಹಣ ವ್ಯಯಿಸುತ್ತಿದೆ ಎಂದು ತಿರುಗೇಟು ನೀಡಿದ್ದರು.
ಯುಎನ್ಐ ಎಸ್ಎಚ್ ವಿಎನ್ ಎಲ್ 1744