Wednesday, Feb 26 2020 | Time 10:46 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಠೇವಣಿ ಇಟ್ಟಿದ್ದ ಹಣ ಮರುಪಾವತಿಸುವಂತೆ ಕೋರಿ ಕಾರ್ತಿ ಅರ್ಜಿ ಸಲ್ಲಿಕೆ: ಇಡಿಗೆ ಸುಪ್ರೀಂ ನೋಟಿಸ್

ಠೇವಣಿ ಇಟ್ಟಿದ್ದ ಹಣ ಮರುಪಾವತಿಸುವಂತೆ ಕೋರಿ ಕಾರ್ತಿ ಅರ್ಜಿ ಸಲ್ಲಿಕೆ: ಇಡಿಗೆ ಸುಪ್ರೀಂ ನೋಟಿಸ್
ಠೇವಣಿ ಇಟ್ಟಿದ್ದ ಹಣ ಮರುಪಾವತಿಸುವಂತೆ ಕೋರಿ ಕಾರ್ತಿ ಅರ್ಜಿ ಸಲ್ಲಿಕೆ: ಇಡಿಗೆ ಸುಪ್ರೀಂ ನೋಟಿಸ್

ನವದೆಹಲಿ, ಜ.13 (ಯುಎನ್‌ಐ) ವಿದೇಶ ಪ್ರವಾಸಕ್ಕೆ ತೆರಳುವಾಗ ಭದ್ರತೆಗಾಗಿ ಇಟ್ಟಿದ್ದ 20 ಕೋಟಿ ರೂ. ಠೇವಣಿಯನ್ನು ಹಿಂದಿರುಗಿಸಬೇಕೆಂದು ಕಾರ್ತಿ ಚಿದಂಬರಂ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸುಪ್ರೀಂ ಕೋರ್ಟ್ ಸೋಮವಾರ ವಿವರವಾದ ಉತ್ತರ ಕೋರಿದೆ.

ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಸಲ್ಲಿಸಿದ್ದ ನೋಟಿಸ್‌ಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ನೇತೃತ್ವದ ಪೀಠ, ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಕಾರ್ತಿ ಅವರಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳನ್ನು ಇಡಿ ಮತ್ತು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿದೆ.

"ನಾವು ಪ್ರಕರಣದ ತನಿಖಾ ಸಂಸ್ಥೆಯಾದ ಇಡಿಗೆ ನೋಟಿಸ್ ನೀಡುತ್ತಿದ್ದೇವೆ. ಪ್ರಕರಣದ ಎಲ್ಲಾ ವಿಷಯದ ಬಗ್ಗೆ ವಿವರವಾದ ಪ್ರತಿಕ್ರಿಯೆಯನ್ನು ಪಡೆಯುತ್ತೇವೆ" ಎಂದು ನ್ಯಾಯಪೀಠ ಹೇಳಿದೆ.

ಕಾರ್ತಿ ಚಿದಂಬರಂ ಅವರು ವಿದೇಶ ಪ್ರವಾಸಕ್ಕೆ ಹೋಗುವಾಗ ನ್ಯಾಯಾಲಯದ ಷರತ್ತಿನಂತೆ ಠೇವಣಿ ಇಟ್ಟಿದ್ದ 20 ಕೋಟಿ ರೂ.ಗಳನ್ನು ಮರುಪಾವತಿಸುವಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ಮುಂದಿನ ವಿಚಾರಣೆಯನ್ನು ಶುಕ್ರವಾರ ನಿಗದಿಪಡಿಸಲಾಗಿದೆ.

ಯುಎನ್ಐ ಎಎಚ್ 2100