Wednesday, Feb 26 2020 | Time 10:30 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Special Share

ಡಿಎಂಕೆ ಮೈತ್ರಿಕೂಟದಿಂದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಚೆನ್ನೈ, ಜನವರಿ 23 (ಯುಎನ್‌ಐ) ತಮಿಳುನಾಡಿನಲ್ಲಿ ಪ್ರತಿಪಕ್ಷ ಡಿಎಂಕೆ ನೇತೃತ್ವದ ಮೈತ್ರಿಕೂಟ ಫೆಬ್ರವರಿ ಎರಡರಿಂದ ಎಂಟರವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರುದ್ಧ ಬೃಹತ್ ಸಹಿ ಅಭಿಯಾನವನ್ನು ಪ್ರಾರಂಭಿಸಲಿದೆ.
ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು
ಸಭೆಯ ನಂತರ ಹೊರಡಿಸಲಾದ ಡಿಎಂಕೆ ಪ್ರಕಟಣೆಯಲ್ಲಿ, ಸಭೆಯಲ್ಲಿ ಪಾಲ್ಗೊಂಡ ಎಲ್ಲಾ ಸಂಸದರು ಸಹಿ ಹಾಕಿದ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದೆ.
ಸಭೆಯಲ್ಲಿ ಸಿಎಎ ಅನ್ನು ರದ್ದುಗೊಳಿಸುವ ಪ್ರಶ್ನೆಯಿಲ್ಲ, ಎನ್ಆರ್‌ಸಿ ಮತ್ತು ಎನ್‌ಪಿಆರ್‌ ಅನ್ನು ಜಾರಿಗೆ ತಲಾಗುವುದು ಎಂಬ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಲಾಯಿತು.
ಸಂಸತ್ತಿನಲ್ಲಿ ಸಿಎಎಗೆ ಬೆಂಬಲ ನೀಡಿದ್ದಕ್ಕಾಗಿ ಆಡಳಿತಾರೂಢ ಎಐಎಡಿಎಂಕೆ ನಿಲುವನ್ನು ಖಂಡಿಸಲಾಯಿತು. ಸಿಎಎ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ ಎಂದು ಹೇಳಿಕೆ ತಿಳಿಸಿದೆ.
ಸಿಎಎಯಲ್ಲಿ ಶ್ರೀಲಂಕಾದ ತಮಿಳರು ಮತ್ತು ಮುಸ್ಲಿಮರನ್ನು ಹೊರಗಿಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಅದು ಹೇಳಿದೆ
ಸಿಎಎಯಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಹೇಳುವ ಮೂಲಕ ಎಐಎಡಿಎಂಕೆ ಪದೇ ಪದೇ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸುವುದಿಲ್ಲ ಎಂದು ಹೇಳುವ ಮೂಲಕ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ದ್ರೋಹ ಬಗೆದಿದೆ. ಕೇರಳ ಮತ್ತು ಪಂಜಾಬ್‌ನಲ್ಲಿ ಅಳವಡಿಸಿಕೊಂಡವರ ಪ್ರಕಾರ ರಾಜ್ಯ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
ಸಿಎಎ ಮೂಲಕ ಬಿಜೆಪಿ ಸರ್ಕಾರ ದೇಶದ ಜನರನ್ನು ವಿಭಜಿಸಲು ಮುಂದಾಗಿದೆ. ಎನ್‌ಪಿಆರ್‌ನಲ್ಲಿ ಕೇಳಲಾಗಿರುವ ಪ್ರಶ್ನೆಗಳು ಸಮರ್ಪಕವಾಗಿಲ್ಲ ಎಂದು ಅದು ಹೇಳಿದೆ.
ಯುಎನ್ಐ ಎಎಚ್ 1416