Friday, Oct 30 2020 | Time 07:05 Hrs(IST)
Karnataka Share

ಡಿ ಜೆ ಹಳ್ಳಿ ಗಲಭೆ: ಎರಡು ದಿನದಲ್ಲಿ ಕಾಂಗ್ರೆಸ್ ವರದಿ

ಬೆಂಗಳೂರು, ಸೆ.20(ಯುಎನ್ಐ) ಡಿ.ಜೆ.ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಕುರಿತು ಕೆಪಿಸಿಸಿ ರಚಿಸಿರುವ ಸತ್ಯಶೋಧನಾ ಸಮಿತಿ ಎರಡು ದಿನದಲ್ಲಿ ಅಂತಿಮ ವರದಿ ಸಲ್ಲಿಸಲು ನಿರ್ಧರಿಸಿದೆ.
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮಿತಿ, ಈಗಾಗಲೇ ಘಟನೆ ನಡೆದಿರುವ ಡಿಜೆ ಹಳ್ಳಿ, ಕೆಜಿ ಹಳ್ಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಅರಿಯುವ ಪ್ರಯತ್ನ ನಡೆಸಿದೆ. ಅಲ್ಲದೇ ಗಲಭೆಯಲ್ಲಿ ಸಂತ್ರಸ್ತರಾದವರ ಕುಟುಂಬದವರಿಂದಲೂ ಮಾಹಿತಿ ಪಡೆದುಕೊಂಡಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೂಡ ಸಮಿತಿ ಮುಂದೆ ಹಾಜರಾಗಿ ತಮಗಾಗಿರುವ ಅನ್ಯಾಯದ ಕುರಿತು ಮಾಹಿತಿ ನೀಡಿದ್ದಾರೆ.
ಸಮಿತಿ ನಾಲ್ಕೈದು ಸಭೆಗಳನ್ನು ನಡೆಸಿ ಘಟನೆ ನಡೆಯಲು ಪ್ರೇರಣೆ ಹಾಗೂ ಹಿನ್ನೆಲೆಯ ಕುರಿತು ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ. ವಿಧಾನಸಭೆ ಅಧಿವೇಶನ ಆರಂಭವಾಗುವುದರಿಂದ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ವಾಸ್ತವ ವರದಿಯ ಅಗತ್ಯವಿರುವುದರಿಂದ ಸದನ ನಡೆಯುವ ಸಂದರ್ಭದಲ್ಲಿಯೇ ಕೆಪಿಸಿಸಿ ಅಧ್ಯಕ್ಷರಿಗೆ ವರದಿ ಸಲ್ಲಿಸಲು ಸಮಿತಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಭಾನುವಾರ ಸಮಿತಿಯ ಅಂತಿಮ ಸಭೆ ನಡೆಸಿದ್ದು, ಸಮಿತಿ ಸದಸ್ಯರಾದ ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ನಸೀರ್ ಅಹಮದ್ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.
ಸಮಿತಿ ಇನ್ನೋರ್ವ ಸದಸ್ಯ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಯುಎನ್‌ಐ ಯುಎಲ್ ಎಎಚ್ 2208
More News
ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

29 Oct 2020 | 9:12 PM

ಬೆಂಗಳೂರು, ಅ 28 (ಯುಎನ್ಐ) 1. ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

 Sharesee more..
ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

29 Oct 2020 | 8:53 PM

ತುಮಕೂರು,ಅ 29 (ಯುಎನ್ಐ) ಹಿಂದಿನ ಸರ್ಕಾರದ ಒಳ್ಳೆಯ ಯೋಜನೆ, ಕಾರ್ಯಕ್ರಮಗಳಿಗೆ ಅನುದಾನ ನೀಡದೇ ಇತಿಶ್ರೀ ಹಾಡಿದ್ದೆ ಬಿಜೆಪಿ, ಯಡಿಯೂರಪ್ಪ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯವಾಗ್ದಾಳಿ ಮಾಡಿದ್ದಾರೆ.

 Sharesee more..