Saturday, Mar 28 2020 | Time 23:22 Hrs(IST)
  • ಕೊವಿದ್‍-19: ರಾಜ್ಯದಲ್ಲಿ ಹೊಸ 12 ಪ್ರಕರಣಗಳು ದೃಢ, ಒಟ್ಟು ಸಂಖ್ಯೆ 76ಕ್ಕೆ ಏರಿಕೆ
  • ಲಾಕ್‌ಡೌನ್: ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ನಿರ್ಬಂಧಗಳು ಸಡಿಲ
  • ಕೊರೊನಾ ನಿರ್ಣಾಯಕ ಹಂತದಲ್ಲಿ, ತುರ್ತು ಪರಿಸ್ಥಿತಿ ಘೋಷಣೆ ಅಗತ್ಯವಿಲ್ಲ : ಅಬೆ
  • ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತ : ಆರು ಸಾವು
  • ಒಂದೇ ದಿನ 194 ಹೊಸ ಖಚಿತ ಪ್ರಕರಣ ದಾಖಲು
  • ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ
  • ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ
  • ಕೋವಿಡ್-19 ತಡೆಯಲು ಗ್ರಾಮಗಳಿಗೆ ನಿರ್ಬಂಧ; ಪಿಐಎಲ್ ಸಲ್ಲಿಕೆ
  • ಕೊರೋನಾ ಪೀಡಿತರಿಗೆ ಪರಿಹಾರ ಕೋರಿ ಪಿಐಎಲ್ ಸಲ್ಲಿಕೆ
  • ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್
  • ಕರ್ನಾಟಕದ ಕಾರ್ಮಿಕರನ್ನು ತೆರವುಗೊಳಿಸುವ ವದಂತಿ ಸುಳ್ಳು; ಗೋವಾ ಸಿಎಂ
  • ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ
  • ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ
  • ಕೊರೋನಾ ಭೀತಿ: 8 ಲಕ್ಷ ಲೀ ಹಾಲು ಮಾರಾಟವಾಗುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ
  • ಮನೆ ವಿತರಣೆಗೆ ಸಿದ್ಧವಾಗಿರಲು ಹೋಟೆಲ್ ಮತ್ತು ಸೂಪರ್ ಮಾರ್ಕೆಟ್‍ಗಳಿಗೆ ಮೈಸೂರು ಜಿಲ್ಲಾಡಳಿತ ಸೂಚನೆ
Karnataka Share

ಡಿಡಿಎಲ್ಆರ್ ನಜ್ಮಾ ಪೀರಜಾದೆಗೆ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

ಬೆಳಗಾವಿ, ಜ.೨೪- ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ ೨೦೧೯-೨೦ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ.
ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರ ಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅದೇ ರೀತಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ವಿವಿಧ ಜನಪರ ಯೋಜನೆಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡು ಗ್ರಾಮೀಣ ಜನರ ಹಾಗೂ ವಿಶೇಷವಾಗಿ ರೈತಸಮುದಾಯದ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇವರ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸೇವಾ ಸರ್ವೋತ್ತಮ‌ ಪ್ರಶಸ್ತಿ ನೀಡುವಂತೆ ಭೂಮಾಪನ ಇಲಾಖೆಯ ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.
ಪೀರಜಾದೆ ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಸೇವಾ ಸರ್ವೋತ್ತಮ ಪ್ರಶಸ್ತಿಯನ್ನು ಸರ್ಕಾರ ನೀಡಿದೆ. ಪ್ರಶಸ್ತಿಯು ೨೫ ಸಾವಿರ ರೂಪಾಯಿ ಪ್ರೋತ್ಸಾಹಧನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಯುಎನ್ಐ ಎನ್ ವಿ ವಿಎನ್ 1728
More News
ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

28 Mar 2020 | 9:54 PM

ಬೆಂಗಳೂರು,ಮಾ 28 []ಯುಎನ್ಐ] ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 Sharesee more..
ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

28 Mar 2020 | 9:41 PM

ಬೆಂಗಳೂರು, ಮಾ 28 (ಯುಎನ್ಐ) ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲ‌ಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

 Sharesee more..