Sunday, Aug 9 2020 | Time 14:13 Hrs(IST)
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
 • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
 • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Sports Share

ಡಿಸೆಂಬರ್ ನಲ್ಲಿ ಇಂಡಿಯಾ ಓಪನ್ ಆಯೋಜನೆ

ನವದೆಹಲಿ, ಮೇ 22 (ಯುಎನ್ಐ)
ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣ ಮುಂದೂಡಿಕೆಯಾಗಿದ್ದ ಒಲಿಂಪಿಕ್ ಅರ್ಹತಾ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಇದೀಗ 2020ರ ಡಿಸೆಂಬರ್ 8ರಿಂದ 13ರವರೆಗೆ ನಡೆಯಲಿದೆ. ಈ ಸಂಬಂಧ ಕೊರೊನಾ ವಿರಾಮದ ನಂತರ ಬ್ಯಾಡ್ಮಿಂಟನ್ ವಿಶ್ವ ಫೆಡರೇಷನ್ (ಬಿಡಬ್ಲ್ಯುಎಫ್) ಪರಿಷ್ಕೃತ ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ವಿಶ್ವ ಟೂರ್ ಸೂಪರ್ 500 ಟೂರ್ನಿಯು ಈ ಮೊದಲು ಕಳೆದ ಮಾರ್ಚ್ 24ರಿಂದ 29ರ ವರೆಗೆ ಹೊಸದಿಲ್ಲಿಯಲ್ಲಿ ನಡೆಯಬೇಕಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಲಿದೆ ಎಂದು ಬಿಡಬ್ಲ್ಯುಎಫ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲ ಪ್ರಮುಖ ಟೂರ್ನಿಗಳು ಆರಂಭವಾಗುವ ಮುನ್ನ ಹೈದರಾಬಾದ್ ಓಪನ್ (ಆಗಸ್ಟ್ 11ರಿಂದ 16) ಮತ್ತು ಸೈಯದ್ ಮೋದಿ ಅಂತಾರಾಷ್ಟ್ರೀಯ ಟೂರ್ನಿ (ನವೆಂಬರ್ 17ರಿಂದ 22) ಜರುಗಲಿವೆ.
ನ್ಯೂಜಿಲೆಂಡ್ ಓಪನ್ ಸೂಪರ್ 300, ಇಂಡೊನೇಷ್ಯಾ ಓಪನ್ ಸೂಪರ್ 1000, ಮಲೇಷ್ಯಾ ಓಪನ್ ಸೂಪರ್ 750, ಥಾಯ್ಲೆಂಡ್ ಓಪನ್ ಸೂಪರ್ 500 ಮತ್ತು ಚೀನಾದಲ್ಲಿ ನಡೆಯಲಿರುವ ವಿಶ್ವ ಟೂರ್ ಫೈನಲ್ಸ್ ಸೇರಿದಂತೆ ಎಂಟು ಟೂರ್ನಿಗಳ ಮೊದಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
"ಬ್ಯಾಡ್ಮಿಂಟನ್ ಟೂರ್ನಿಯನ್ನು ಮರಳಿ ಯೋಜಿಸುವುದು ಕಷ್ಟದ ಕೆಲಸವಾಗಿದೆ. ಇದು ಮಂದಗೊಳಿಸಿದ ವೇಳಾಪಟ್ಟಿ. ಆದರೆ ಇದು ಸುರಕ್ಷಿತ ಮತ್ತು ವ್ಯವಸ್ಥಿತವಾಗಿ ಸಾಧ್ಯವಾದಾಗ ಮತ್ತೆ ಪುನರಾರಂಭಿಸಲು ಅನುವು ಮಾಡಿಕೊಡುವ ಚೌಕಟ್ಟನ್ನು ಒದಗಿಸುತ್ತದೆ ಎಂದು ನಾವು ನಂಬುತ್ತೇವೆ," ಎಂದು ಬಿಡಬ್ಲ್ಯಎಫ್ ಪ್ರಧಾನ ಕಾರ್ಯದರ್ಶಿ ಥಾಮಸ್ ಲುಂಡ್ ಹೇಳಿದ್ದಾರೆ.
ಯುಎನ್ಐಆರ್ ಕೆ1752