Wednesday, Jan 29 2020 | Time 15:24 Hrs(IST)
 • ಅಮೆರಿಕಾದಲ್ಲಿ ಸಿನಿಮಾಗಳಿಗಿಂತ, ಗ್ರಂಥಾಲಯಗಳಿಗೆ ತೆರಳುವವರ ಸಂಖ್ಯೆಯೇ ಹೆಚ್ಚಂತೆ !
 • ವುಹಾನ್‌ನಿಂದ ವಿದೇಶಿ ನಾಗರಿಕರ ಸ್ಥಳಾಂತರಕ್ಕೆ ಚೀನಾ ಸಹಾಯ
 • ಎಂ ಎಸ್ ಧೋನಿ ದಾಖಲೆ ಮುರಿದ ನಾಯಕ ವಿರಾಟ್ ಕೊಹ್ಲಿ
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
Karnataka Share

ಡಿ 11 ರಿಂದ ಶಾಲಾ ಲಸಿಕಾ ಅಭಿಯಾನ

ಬೆಂಗಳೂರು, ಡಿ 8 (ಯುಎನ್ಐ) ಬೆಂಗಳೂರು ನಗರ ಜಿಲ್ಲೆಯಲ್ಲಿ ಡಿಸೆಂಬರ್ 11 ರಿಂದ 31 ರವರೆಗೆ ಶಾಲಾ ಮಕ್ಕಳಿಗೆ ವಿಶೇಷ ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು, ಐದು ಮತ್ತು ಹತ್ತನೇ ತರಗತಿಯ ಎಲ್ಲಾ ಮಕ್ಕಳಿಗೆ ಅವರವರ ಶಾಲೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದರು.5, 6 ನೇ ವಯಸ್ಸಿನ ಮಕ್ಕಳಿಗೆ ಡಿಪಿಟಿ ವರ್ಧಕ ಲಸಿಕೆ ಹಾಗೂ ಹತ್ತನೇ ವಯಸ್ಸಿನ ಮಕ್ಕಳಿಗೆ ಟಿಡಿ ಲಸಿಕೆಯನ್ನು ನೀಡಲಾಗುವುದು. ಜೊತೆಗೆ ಲಸಿಕಾಕರಣ ಕಾರ್ಡ್ ಸಹ ನೀಡಲಾಗುತ್ತದೆ ಎಂದು ಅವರು ಹೇಳಿದರು.


ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಕೇಂದ್ರ ಹತ್ತಿರದ ಅಂಗನವಾಡಿಗಳಲ್ಲಿ ಲಸಿಕೆ ಹಾಕಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಲಸಿಕೆಗಳನ್ನು ಮಕ್ಕಳಿಗೆ ನೀಡುವುದರಿಂದ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು ರೋಗಗಳಿಂದ ರಕ್ಷಿಸುತ್ತದೆ.

ಈ ಲಸಿಕೆ ಕುರಿತು ಪೋಷಕರಿಗೆ ಅರಿವು ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಎ.ಶ್ರೀನಿವಾಸ್, ಮಕ್ಕಳ ಆರೋಗ್ಯಾಧಿಕಾರಿ ಡಾ.ಸಿರಾಜ್ ಮದನಿ, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


ಯುಎನ್ಐ ಜಿಎಸ್ಆರ್ 1305