Sunday, Mar 29 2020 | Time 00:45 Hrs(IST)
Special Share

ತಮ್ಮ ಸ್ಮಾರ್ಟ್ ನೆಸ್ ಹಿಂದಿರುವ ರಹಸ್ಯ ಬಹಿರಂಗಪಡಿಸಿದ ಪ್ರಧಾನಿ ಮೋದಿ

ನವದೆಹಲಿ, ಜ ೨೪(ಯುಎನ್‌ಐ) ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಮಾರ್ಟ್ ನೆಸ್ ಹಿಂದಿನ ರಹಸ್ಯ ಬಹಿರಂಗಪಡಿಸಿದ್ದಾರೆ. ಸದಾ ತಮ್ಮ ಮುಖ ಪ್ರಕಾಶ ಮಾನವಾಗಿ ಹೊಳೆಯಲು ಹಿಂದಿರುವ ಹಲವು ಕಾರಣಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಗಣತಂತ್ರ ದಿನೋತ್ಸವ ಅಂಗವಾಗಿ “ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಮಕ್ಕಳ ಪ್ರಶಸ್ತಿ ೨೦೨೦” ಪ್ರಧಾನ ಸಂದರ್ಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಬಹಳ ಹೊತ್ತು ಅವರೊಂದಿಗೆ ಸಮಯ ಕಳೆದು, ಕೆಲ ವಿಷಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಪ್ರಧಾನಿ ಮಾತನಾಡುತ್ತಾ.. ತಮ್ಮ ಮುಖ ಸದಾ ಪ್ರಕಾಶ ಮಾನವಾಗಿ ಹೊಳೆಯಲು ಕಾರಣವೇನು ಎಂದು ಒಬ್ಬರು ಪ್ರಶ್ನಿಸಿದ್ದರು ಎಂಬುದನ್ನು ಹೇಳಿಕೊಂಡಿದ್ದಾರೆ.

ನಾನು ಸದಾ ಕಷ್ಟಪಟ್ಟು ಕೆಲಸ ಮಾಡುತ್ತೇನೆ. ಬೆವರು ಹರಿಸುತ್ತೇನೆ. ಇದು ತನ್ನ ಚರ್ಮದ ಹೊಳಪಿಗೆ ಕಾರಣ ಎಂದು ನಾನು ಅವರಿಗೆ ಉತ್ತರಿಸಿದ್ದೆ ಎಂದು ಪ್ರಧಾನಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಸದಾ ಕಷ್ಟಪಟ್ಟು ಕೆಲಸ ಮಾಡಬೇಕು. ದಿನಕ್ಕೆ ನಾಲ್ಕು ಬಾರಿ ಬೆವರು ಹರಿಸುವ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಮೋದಿ ಸಲಹೆ ನೀಡಿದರು.
ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕಠಿಣ ಪರಿಶ್ರಮದ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಮಾನ್ಯತೆ ಮತ್ತು ಪ್ರಶಸ್ತಿಗಳು ಬಂದಾಗ ಕೆಲವರು ಅಹಂಕಾರದಿಂದ ಶ್ರಮ ಪಡುವುದನ್ನು ನಿಲ್ಲಿಸುತ್ತಾರೆ, ಆದರೆ ಕೆಲವರಿಗೆ ಪ್ರಶಸ್ತಿ, ಮಾನ್ಯತೆ ಇನ್ನಷ್ಟು ಕಠಿಣವಾಗಿ ದುಡಿಯಲು ಪ್ರೇರೇಪಣೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಪ್ರಶಸ್ತಿಗಳು ನಮ್ಮ ಪರಿಶ್ರಮಕ್ಕೆ ಅಂತ್ಯವಿಲ್ಲ, ಬದುಕಿಗೆ ನಾಂದಿ ಎಂದು ಮೋದಿ ವಿದ್ಯಾರ್ಥಿಗಳಿಗೆ ಸೂಚಿಸಿದರು.
ಯುಎನ್‌ಐ ಕೆವಿಆರ್ ೧೯೦೮
More News

ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ

28 Mar 2020 | 9:49 PM

 Sharesee more..
ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

28 Mar 2020 | 9:36 PM

ತಿರುಪತಿ, ಮಾ 28 (ಯುಎನ್ಐ) ಕೊರೋನಾ ವೈರಸ್ ಸೋಂಕನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ವಸತಿರಹಿತರ ನೆರವಿಗೆ 15 ಸಾವಿರ ಪುಳಿಯೋಗರೆ ಪೊಟ್ಟಣಗಳನ್ನು ವಿತರಿಸಿದೆ.

 Sharesee more..
ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ  ಡಿಜಿಪಿ ಪ್ರವೀಣ್ ಸೂದ್  ಮನವಿ

ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

28 Mar 2020 | 9:22 PM

ಬೆಂಗಳೂರು, ಮಾ ೨೮(ಯುಎನ್‌ಐ) ರಾಷ್ಟ್ರೀಯ ಲಾಕ್ ಡೌನ್ ಜಾರಿಗೊಳಿಸಿರುವ ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಒದಗಿಸಲು ಬಯಸುವ ಪರೋಪಕಾರಿಗಳು ಆಹಾರವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ತಲುಪಿಸಿದರೆ, ಅಗತ್ಯವಿರುವ ಜನರಿಗೆ ತಲುಪಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಮನವಿ ಮಾಡಿಕೊಂಡಿದ್ದಾರೆ.

 Sharesee more..
ಕಲ್ಲಿದ್ದಲು ಸುಗಮ ಸರಬರಾಜಿಗೆ  ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

28 Mar 2020 | 7:27 PM

ನವದೆಹಲಿ, ಮಾ 28 (ಯುಎನ್‌ಐ) ದೇಶದಲ್ಲಿ ಕಲ್ಲಿದ್ದಲು ಸರಬರಾಜನ್ನು ಅತ್ಯಗತ್ಯ ಸೇವೆ ಎಂದು ಘೋಷಿಸಲಾಗಿದ್ದು, ಲಾಕ್‌ ಡೌನ್ ಅವಧಿಯಲ್ಲಿ ನಿರ್ಣಾಯಕ ಕಲ್ಲಿದ್ದಲು ಪೂರೈಕೆಯನ್ನು ಖಾತರಿ ಪಡಿಸಲು ಅಹರ್ನಿಶಿ ಶ್ರಮಿಸುವಂತೆ ಸಚಿವಾಲಯದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ನಿರ್ದೇಶನ ನೀಡಿದ್ದಾರೆ.

 Sharesee more..