Sunday, Nov 1 2020 | Time 01:07 Hrs(IST)
Entertainment Share

ತಲೆಮರೆಸಿಕೊಂಡಿಲ್ಲ, ನಾಳೆ ವಿಚಾರಣೆಗೆ ಹಾಜರಾಗ್ತೀವಿ : ಐಂದ್ರಿತಾ ಟ್ವೀಟ್

ಬೆಂಗಳೂರು, ಸೆ 15 (ಯುಎನ್ಐ) ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ದಂಪತಿ ಇರಲಿಲ್ಲವಾದ ಕಾರಣ ಹಾಗೂ ದೂರವಾಣಿ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪರಾರಿಯಾಗಿದ್ದಾರೆಯೇ ಎಂಬ ಗುಮಾನಿ ಎದುರಾಗಿತ್ತು.

ಹೀಗಾಗಿ ಟ್ವೀಟ್ ಮಾಡಿರುವ ದಂಪತಿ, ನಾವೆಲ್ಲೂ ತಲೆಮರೆಸಿಕೊಂಡಿಲ್ಲ. ಬುಧವಾರ ವಿಚಾರಣೆಗೆ ಹಾಜರಾಗುತ್ತೇವೆ ಎಂದು ತಿಳಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ವಾಟ್ಸಪ್ ಮೂಲಕ ದಂಪತಿಗೆ ಪ್ರತ್ಯೇಕವಾಗಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುತ್ತೇವೆ, ತನಿಖೆಗೆ ಸಂಪೂರ್ಣ ಸಹಕರಿಸುತ್ತೇವೆ ಎಂದು ದಂಪತಿ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ಯುಎನ್ಐ ಎಸ್‍ಎ 1703
More News

ನಟ, ನಿರ್ಮಾಪಕ ದಿನೇಶ್ ಗಾಂಧಿ ನಿಧನ

31 Oct 2020 | 1:53 PM

 Sharesee more..

ಕಮಲ ಹಾಸನ್ ಜನ್ಮದಿನದಂದು 232ನೇ ಫಸ್ಟ್ ಲುಕ್

31 Oct 2020 | 12:15 PM

 Sharesee more..

ಡಿ ಬಾಸ್ ರೀತಿ ಹೆಸರು ಮಾಡ್ಬೇಕು : ಅಮೂಲ್ಯ

31 Oct 2020 | 8:32 AM

 Sharesee more..

ಕಾಜಲ್ - ಕಿಚ್ಲು ಕಲ್ಯಾಣ

30 Oct 2020 | 3:03 PM

 Sharesee more..