Friday, Feb 28 2020 | Time 09:48 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ತಾರತಮ್ಯದ ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್ಸಿಗೆ ಕಾಂಗ್ರೆಸ್ ಆಗ್ರಹ

ನವದೆಹಲಿ, ಜನವರಿ, 11(ಯುಎನ್ಐ ) ಪೌರತ್ವ ತಿದ್ದುಪಡಿ ಕಾಯ್ದೆ ತಾರತಮ್ಯದಿಂದ ಕೂಡಿದ್ದು, ಧರ್ಮದ ಆಧಾರದ ಮೇಲೆ ದೇಶ ವಿಭಜಿಸುವ ಉದ್ದೇಶ ಹೊಂದಿದೆ ಆದ್ದರಿಂದ ಕೇಂದ್ರ ಕೂಡಲೇ ಇದನ್ನು ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ಒಕ್ಕೂರಲಿನಿಂದ ಆಗ್ರಹಪಡಿಸಿದೆ.
ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ.
ಸಿಎಎ ವಿರೋಧಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಸಂತ್ರಸ್ತರಿಗೆ ನ್ಯಾಯ ಒದಗಿಸಲು ಉನ್ನತ ಆಯೋಗ ರಚಿಸುವಂತೆ ಒತ್ತಾಯಿಸಲಾಗಿದೆ .
ಸಭೆಯಲ್ಲಿ ಮಾತನಾಡಿದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ತಾರತಮ್ಮ ಹಾಗೂ ವಿಭಜನೆಯ ಕಾನೂನು. ಜನರನ್ನು ಧಾರ್ಮಿಕ ನೆಲೆಗಟ್ಟಿನ ಮೇಲೆ ವಿಭಜಿಸುವ ಈ ಕಾನೂನಿನ ಕೆಟ್ಟ ಉದ್ದೇಶ ದೇಶದ ಪ್ರತಿಯೊಬ್ಬ ದೇಶಭಕ್ತ, ಸಹಿಷ್ಣು ಹಾಗೂ ಜಾತ್ಯತೀಯ ನಾಗರಿಕನಿಗೂ ಅರಿವಾಗಿದೆ ಎಂದರು.
ದೇಶದಲ್ಲಿ ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರಸ್ತಾಪಿಸಿ, ಹೊಸ ಪೌರತ್ವ ಕಾನೂನಿನ ಅನುಷ್ಠಾನದಿಂದಾಗುವ ಗಂಭೀರ ಹಾನಿಯನ್ನು ಸಾವಿರಾರು ಯುವಕ-ಯುವತಿಯರು ವಿಶೇಷವಾಗಿ ವಿದ್ಯಾರ್ಥಿಗಳು ಅರಿತುಕೊಂಡಿದ್ದಾರೆ. ಈ ಕಾರಣದಿಂದಾಗಿ ಇಂದು ದೇಶವ್ಯಾಪಿ ಸಿಎಎ ವಿರೋಧಿ ಪ್ರತಿಭಟನೆಗಳು ಹೆಚ್ಚಾಗುತ್ತಿವೆ ಎಂದರು.
ಕೆಲವು ರಾಜ್ಯಗಳ ಪರಿಸ್ಥಿತಿ ಆತಂಕಕಾರಿಯಾಗಿದೆ. ಮುಖ್ಯವಾಗಿ ಉತ್ತರ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ದೆಹಲಿಯನ್ನು ಪೊಲೀಸ್ ರಾಜ್ಯಗಳಾಗಿ ಪರಿವರ್ತಿಸಲಾಗಿದೆ. ಉತ್ತರಪ್ರದೇಶದ ಅನೇಕ ಪಟ್ಟಣಗಳಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯ, ಜೆಎನ್ಯು, ಬನಾರಸ್ ಹಿಂದು ವಿವಿ, ಅಲಹಾಬಾದ್ ವಿವಿ, ಗುಜರಾತ್ ವಿಶ್ವವಿದ್ಯಾಲಯ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿತಿಮೀರಿದ ಪೊಲೀಸರು ಮತ್ತು ದಾಳಿಕೋರರನ್ನು ಬಳಸಿಕೊಳ್ಳುತ್ತಿರುವುದರ ಬಗ್ಗೆ ನಾವು ದಿಗಿಲುಗೊಂಡಿದ್ದೇವೆ ಎಂದು ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಜಮ್ಮು-ಕಾಶ್ಮೀರ ವಿಚಾರವನ್ನು ಪ್ರಸ್ತಾಪ ಮಾಡಿದ ಸೋನಿಯಾ ಗಾಂಧಿ ಅವರು, ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮೂಲಭೂತ ಹಕ್ಕು ನಿರಾಕರಿಸುತ್ತಿರುವುದು ದುಃಖ ಮತ್ತು ಕಳವಳಕಾರಿ ಸಂಗತಿಯಾಗಿದೆ ಎಂದರು.
ಯುಎನ್ಐ ಕೆಎಸ್ಆರ್ 2136