Wednesday, Feb 26 2020 | Time 09:34 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ತೈಲ ಸಮಸ್ಯೆ ಎದುರಿಸಲು ಸರ್ಕಾರ ಬದ್ಧ; ಧರ್ಮೇಂದ್ರ ಪ್ರಧಾನ್

ತೈಲ ಸಮಸ್ಯೆ ಎದುರಿಸಲು ಸರ್ಕಾರ ಬದ್ಧ; ಧರ್ಮೇಂದ್ರ  ಪ್ರಧಾನ್
ತೈಲ ಸಮಸ್ಯೆ ಎದುರಿಸಲು ಸರ್ಕಾರ ಬದ್ಧ; ಧರ್ಮೇಂದ್ರ ಪ್ರಧಾನ್

ನವದೆಹಲಿ, ಜನವರಿ 8 (ಯುಎನ್‌ಐ) ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ತೈಲ ಪೂರೈಕೆಯ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ತೈಲ ಉತ್ಪಾದಕ ರಾಷ್ಟ್ರಗಳೊಂದಿಗೆ

ಸರ್ಕಾರವು ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ತೈಲ ಪೂರೈಕೆ ಕುರಿತು ತಾವು ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ತಯಾರಿ ನಡೆಸುತ್ತಿದ್ದೇವೆ. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಕೊಲ್ಲಿ ಪ್ರದೇಶದ ವಿವಿಧ ದೇಶಗಳಲ್ಲಿ ತಮ್ಮ ಸಹವರ್ತಿ ಸಚಿವರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪ್ರಧಾನ ಮಂತ್ರಿಗಳ ಕಚೇರಿ ಸೇರಿದಂತೆ ವಿವಿಧ ಹಂತಗಳಲ್ಲಿ ವಿಷಯಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಇರಾನ್ ಕಮಾಂಡರ್ ಮೇಜ್ ಜನರಲ್ ಕಾಸೆಮ್ ಸೊಲೆಮಾನಿ ಅವರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ಅಮೆರಿಕದ ಮಿಲಿಟರಿ ನೆಲೆಗಳ ವಿರುದ್ಧ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು ಕನಿಷ್ಠ 80 ಅಮೆರಿಕಾ ಸೈನಿಕರು ಮೃತರಾಗಿದ್ದಾರೆ ಎಂದು ವರದಿಯಾಗಿದೆ.

ಯುಎನ್ಐ ಡಿಸಿ ವಿಎನ್ 1650