Monday, Jul 22 2019 | Time 07:07 Hrs(IST)
  • ಶಾಸಕರು ರಾಜಕೀಯ ವ್ಯಭಿಚಾರ ಮಾಡಿದ್ದಾರೆ : ದಿನೇಶ್ ಗುಂಡೂರಾವ್ ಗಂಭೀರ ಆರೋಪ
International Share

ದಕ್ಷಿಣ ಆಫ್ಘಾನಿಸ್ತಾನದಲ್ಲಿ ಭದ್ರತಾ ಪಡೆಗಳಿಂದ 7 ಉಗ್ರರು ಹತ

ಲಷ್ಕರ್ಗಾ, ಜುಲೈ 11 (ಕ್ಸಿನ್ಹುವಾ) ಆಫ್ಘಾನಿಸ್ತಾನದ ದಕ್ಷಿಣ ಹೆಲ್ಮಾಂಡ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ತಾಲಿಬಾನ್ ಸಂಘಟನೆಗೆ ನಿಷ್ಠರಾಗಿದ್ದ ಕನಿಷ್ಠ ಏಳು ಉಗ್ರರು ಸಾವನ್ನಪ್ಪಿದ್ದು, ಇತರ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಪೊಲೀಸ್ ಮುಖ್ಯಸ್ಥ ಅಬ್ದುಲ್ ಸಲಾಮ್ ಅಫ್ಘನ್‍ ಗುರುವಾರ ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ಪ್ರಾಂತ್ಯದ ಪುಲ್-ಎ-ಸಯಾಹ್ ಪ್ರದೇಶದಲ್ಲಿ ಉಗ್ರರ ಗುಂಪೊಂದು ಭದ್ರತಾ ಶಿಬಿರದ ಮೇಲೆ ದಾಳಿ ನಡೆಸಲು ಹೊರಟಿದ್ದಾಗ, ಭದ್ರತಾ ಪಡೆಗಳು ಹೊಂಚು ಹಾಕಿ ಅವರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಉಗ್ರರ ಕಮಾಂಡರ್ ಮಾವ್ಲವಿ ಶಬೀರ್ ಸೇರಿದಂತೆ ಏಳು ಉಗ್ರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 8 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿಯ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಸರ್ಕಾರಿ ಪಡೆಗಳ ವಿರುದ್ಧ ಸಂಘರ್ಷಕ್ಕಿಳಿದಿರುವ ತಾಲಿಬಾನ್ ಉಗ್ರರು ವರದಿಯ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಯುಎನ್‍ಐ ಎಸ್‍ಎಲ್‍ಎಸ್‍ ಎಎಚ್‍1232