Friday, Dec 6 2019 | Time 21:07 Hrs(IST)
 • ಹೆಟ್ಮೇರ್, ಲೆವಿಸ್ ಸ್ಫೋಟಕ ಬ್ಯಾಟಿಂಗ್: ಭಾರತಕ್ಕೆೆ 208 ರನ್ ಕಠಿಣ ಗುರಿ
 • ಚಿತ್ರೋತ್ಸವ;; ಎರಡನೇ ದಿನದಂದು 43 ಚಿತ್ರಗಳ ಪ್ರದರ್ಶನ
 • ಅಯೋಧ್ಯಾ ಭೂ ವಿವಾದ; ನಾಲ್ಕು ಮರುಪರಿಶೀಲನಾ ಅರ್ಜಿ ಸಲ್ಲಿಕೆ
 • ಸೈನಿಕರಿಗಾಗಿ ಭವನ ನಿರ್ಮಾಣ,ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ:ಮುಖ್ಯಮಂತ್ರಿ
 • “ಕೈಲಾಸ” ದೇಶ ಸೃಷ್ಟಿಸುವುದು ವೆಬ್ ಸೈಟ್ ಆರಂಭಿಸಿದಷ್ಟು ಸುಲಭವಲ್ಲ !
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧಿವಶ
 • ಟೇಬಲ್ ಟೆನಿಸ್ ಇಬ್ಬರು ಕೋಚ್‌ಗಳು ವಿಧವಶ
 • ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ 1023 ತ್ವರಿತ ನ್ಯಾಯಾಲಯ ಸ್ಥಾಪನೆ
 • ಇಂತಹ ಎನ್ ಕೌಂಟರ್ ಯುಪಿ, ದೆಹಲಿಯಲ್ಲೂ ನಡೆಯಲಿ : ಮಾಯಾವತಿ
 • ಮಂಡ್ಯ ವಿ ಸಿ ಫಾರಂನಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಆರಂಭ
 • ದಕ್ಷಿಣ ಏಷ್ಯಾ ಕ್ರೀಡಾಕೂಟ: ಕರ್ನಾಟಕದ ಶ್ರೀಹರಿ, ಲಿಖಿತ್ ಗೆ ಚಿನ್ನ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿರಿಲ್, ಅಶ್ಮಿತಾಗೆ ಚಿನ್ನದ ಪದಕ
 • ರಾಷ್ಟ್ರೀಯ ಪೊಲೀಸ್ ಸಮಾವೇಶ: ಪುಣೆಗೆ ಆಗಮಿಸಿದ ಅಮಿತ್ ಶಾ
 • ದಕ್ಷಿಣ ಏಷ್ಯನ್ ಕ್ರೀಡಾಕೂಟ: ಟೇಬಲ್ ಟೆನಿಸ್‌ನಲ್ಲಿ ಭಾರತಕ್ಕೆೆ ಚಿನ್ನ, ಬೆಳ್ಳಿ
 • ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈ ಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ
Special Share

ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2.85 ಲಕ್ಷ ಯಾತ್ರಿಕರ ಭೇಟಿ

ಶ್ರೀನಗರ, ಜುಲೈ 22 (ಯುಎನ್ಐ) ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿನ ಪವಿತ್ರ ಅಮರನಾಥ ಗುಹೆಗೆ ಕೇವಲ 22 ದಿನಗಳಲ್ಲಿ ದಾಖಲೆಯ 2.85 ಲಕ್ಷ ಯಾತ್ರಿಕರು ಭೇಟಿ ನೀಡಿದ್ದು, ಇದು 2018ರ ಒಟ್ಟು ಯಾತ್ರಿಕರಿಗೆ ಸಮನಾಗಿದೆ.
ಅಧಿಕೃತ ವಕ್ತಾರರ ಪ್ರಕಾರ, 22ನೇ ದಿನ 13,377 ಯಾತ್ರಿಕರು ಅಮರನಾಥ ಗುಹೆಗೆ ಭೇಟಿ ನೀಡಿದ್ದಾರೆ. 2019ರ ಜುಲೈ ಒಂದರಿಂದ ಆರಂಭಗೊಂಡ ಅಮರನಾಥ ಯಾತ್ರೆಯಲ್ಲಿ ಇಲ್ಲಿಯವರೆಗೆ 2.85 ಯಾತ್ರಿಕರು ಗುಹೆಯ ದರ್ಶನ ಪಡೆದಿದ್ದಾರೆ.
ಕಳೆದ ವರ್ಷದ ಆರು ದಿನಗಳ ಯಾತ್ರೆಯಲ್ಲಿ, ಒಟ್ಟು 2.85 ಜನರು ಯಾತ್ರೆ ಕೈಗೊಂಡಿದ್ದರು. ಆದರೆ, ಈ ವರ್ಷ ಕೇವಲ 22 ದಿನಗಳಲ್ಲಿ ಅದೇ ಸಂಖ್ಯೆಯ ಜನರು ಆಗಮಿಸಿದ್ದಾರೆ.
ಈ ನಡುವೆ, ಶೇಷ್ ನಾಗ್ ಶಿಬಿರದಿಂದ ಗಂಭೀರ ಅನಾರೋಗ್ಯಕ್ಕೀಡಾಗಿದ್ದ ಗುಜರಾತ್ ನಿವಾಸಿ ವಿಜಯ್ ರಾಥೋಡ್ ಎಂಬ ಯಾತ್ರಿಕ ಹಾಗೂ ಫೂಲ್ ಕನ್ವರ್ ನಿಂದ ಓರ್ವ ಸಿಆರ್ ಪಿಎಫ್ ಅಧಿಕಾರಿಯನ್ನು ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ನಿರ್ದೇಶನದ ಮೇರೆಗೆ ಹೆಲಿಕಾಪ್ಟರ್ ಮೂಲಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ.
ಅನಾರೋಗ್ಯಕ್ಕೀಡಾಗಿರುವ 14 ಯಾತ್ರಿಕರನ್ನು ದೇಗುಲದ ಮಂಡಳಿಯ ಸದಸ್ಯರು ವಿಮಾನದ ಮೂಲಕ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದು, ತುರ್ತು ಚಿಕಿತ್ಸೆ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಯುಎನ್ಐ ಎಸ್ಎಚ್ ಎಸ್ಎ 1923