Monday, Aug 3 2020 | Time 23:21 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Karnataka Share

ದುಬೈನಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆ

ಬೆಂಗಳೂರು, ಜು.5(ಯುಎನ್‌ಐ) ಕ್ರಾಂತಿಕಾರಿ ಬಸವಣ್ಣನವರ ವಚನಗಳು ಬಸವ ಸಾಹಿತ್ಯದ ಮಹತ್ವ ಹಾಗೂ ಬಸವೇಶ್ವರರ ವಿಚಾರಧಾರೆಗಳು ದೇಶದ ಗಡಿಯಾಚೆಯೂ ಪಸರಿಸುತ್ತಿವೆ. ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣ ಪ್ರತಿಮೆ ಪ್ರತಿಷ್ಠಾಪಿಸಿದ್ದು ಇತಿಹಾಸವಾದರೂ ಇದೀಗ ಲಿಂಗಾಯತ ಸಮುದಾಯದ ಮುಖಂಡ ಮಾಜಿ ಸಚಿವ ಎಂ.ಬಿ.ಪಾಟೀಲ್ ಇದೀಗ ಮತ್ತೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದ್ದಾರೆ.
ಇದೀಗ ಎಂ.ಬಿ.ಪಾಟೀಲ್ ಸಹಾಯ ಮತ್ತು ಸಹಕಾರದಿಂದ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗಿದೆ. ಆ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ.
ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.
ದುಬೈ ಬಸವ ಸಮಿತಿಯವರು ಬಸವಣ್ಣನ ಮೂರ್ತಿಯನ್ನು ಬೆಂಗಳೂರಿನ ಗಾಯತ್ರಿ ಶಿಲ್ಪಿ ಅವರು ಕೆತ್ತನೆ ಮಾಡಿದ್ದು ದುಬೈಗೆ ತೆಗೆದುಕೊಂಡು ಹೋಗಿದ್ದಾರೆ.
ಬಸವ ಜಯಂತಿ ಸಂದರ್ಭದಲ್ಲಿ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಯೋಜನೆ ಹಾಕಿಕೊಂಡಿದ್ದರು. ಆದರೆ, ಕೊರೊನಾ ಲಾಕ್ ಡೌನ್ ಪರಿಣಾಮ ಬಸವ ಜಯಂತಿ ಕಾರ್ಯಕ್ರಮ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸರಳವಾಗಿ ಬಸವಣ್ಣನ ಪ್ರತಿಷ್ಠಾಪನೆ ಮಾಡಲಾಗಿದೆ.
ಈ ವೇಳೆ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ವಿಪುಲ್ ಶಾ ಮಾತನಾಡಿ, ಸದ್ಯದ ಕೋವಿಡ್ ಪರಿಸ್ಥಿತಿಯಲ್ಲಿ ಈ ಕಾರ್ಯಕ್ರಮವನ್ನು ಅತ್ಯಂತ ಸರಳ ರೀತಿಯಲ್ಲಿ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಕನ್ನಡಿಗರೆಲ್ಲರನ್ನೂ ಸೇರಿಸಿ ಅಧಿಕೃತವಾಗಿ ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ನೆರವೇರಿಸಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದರು.
ಕರ್ನಾಟಕದ ಮಹಾನ್ ಸಮಾಜ ಸುಧಾರಕರಾದ ಬಸವಣ್ಣನವರ ವಚನಗಳಿಂದ ನಾವೆಲ್ಲರೂ ಪ್ರೇರೇಪಿತರಾಗಬೇಕೆಂದು ಹೇಳಿ ಬಸವ ಸಮಿತಿ ದುಬೈಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಯುಎಇ ಬಸವ ಸಮಿತಿ ದುಬೈ ಅಧ್ಯಕ್ಷ‌ ಸತೀಶ್ ಹಿಂಡೇರ, ಸಲಹಾ ಹಾಗೂ ಸ್ಥಾಪಕ ಸಮಿತಿಯ ಸದಸ್ಯರಾದ ಚಂದ್ರಶೇಖರ ಲಿಂಗದಳ್ಳಿ, ಬಸವ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಮುಳ್ಳೂರ್, ಡಾ. ಮಮತಾ ರೆಡ್ಡೇರ ಹಾಜರಿದ್ದರು.
ಯುಎನ್ಐ ಯುಎಲ್ ಎಎಚ್ 1200